
ಪ್ರಜಾವಾಣಿ ವಾರ್ತೆ
ಗುಡಿಬಂಡೆ: ರಾಜ್ಯದಾದ್ಯಂತ ಜೀತದಾಳುಗಳ ಬಗ್ಗೆ ಸರ್ಕಾರದಿಂದ ಜಾಗೃತಿ ಮೂಡಿಸಬೇಕೆಂದು ಆದೇಶವಿದ್ದರೂ, ಜಿಲ್ಲಾಡಳಿತ ಯಾವುದೇ ಕಾರ್ಯಕ್ರಮ ಮಾಡದೇ ನಿರ್ಲಕ್ಷ್ಯ ಮಾಡಿದೆ ಎಂದು ಜೀವಿಕಾ ಸಂಘಟನೆ ಜಿಲ್ಲಾ ಸಂಚಾಲಕ ನಾರಾಯಣಸ್ವಾಮಿ ಆರೋಪಿಸಿದರು.
ಪಟ್ಟಣದ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜೀತದಾಳುಗಳ ಬಗ್ಗೆ ಜಿಲ್ಲಾಡಳಿತಕ್ಕೆ ಕಾಳಜಿ ಇಲ್ಲ. ಜೊತೆಗೆ ಜೀತದಾಳುಗಳಿಗೆ ಮಾರಕವಾಗಿರುವ ಎಸ್‌ಒಪಿ ಯೋಜನೆ ಜಾರಿಗೆ ತಂದಿದ್ದಾರೆ. ಹಾಗಾಗಿ ಇದನ್ನು ಕೈಬಿಡಬೇಕೆಂದು ಕೇಂದ್ರ ಸರ್ಕಾರದ ಒತ್ತಾಯಿಸಿದರು.
ಆಂಜಿನಪ್ಪ, ಡಿಡಿ ಮೂರ್ತಿ, ಮೂರ್ತಿ, ಜೀತದಾಳು ನರಸಿಂಹಮೂರ್ತಿ, ಮುನಿಯಪ್ಪ ಸೇರಿದಂತೆ ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.