ಗೌರಿಬಿದನೂರು: ನಗರದ ಅಂಬೇಡ್ಕರ್ ಅಧ್ಯಯನ ಕೇಂದ್ರದಲ್ಲಿ ಡಾ.ಎಚ್. ನರಸಿಂಹಯ್ಯ ಅವರ ಅಭಿವೃದ್ಧಿ ಪ್ರಾಧಿಕಾರದಿಂದ ಮಂಗಳವಾರ ಉದ್ಯೋಗ ಮೇಳ ಹಮ್ಮಿಕೊಳ್ಳಲಾಯಿತು.
ಡಾ. ಎಚ್.ಎನ್ ಪ್ರಾಧಿಕಾರದ ಅಧ್ಯಕ್ಷ ಎನ್.ಎಚ್. ಶಿವಶಂಕರರೆಡ್ಡಿ ಮಾತನಾಡಿ, ಬೆಂಗಳೂರು, ದೇವನಹಳ್ಳಿ ಸೇರಿದಂತೆ ತಾಲ್ಲೂಕಿನ ಕುಡುಮಲಕುಂಟೆ ಕೈಗಾರಿಕಾ ಪ್ರದೇಶದಲ್ಲಿರುವ 65ಕ್ಕೂ ಹೆಚ್ಚು ಕಂಪನಿಗಳು ತಾಲ್ಲೂಕಿನ ನಿರುದ್ಯೋಗ ಯುವಕರಿಗೆ ಉದ್ಯೋಗ ನೀಡಲು ವೇದಿಕೆ ಕಲ್ಪಿಸಿವೆ ಎಂದರು.
ಸಾಕಷ್ಟು ನಿರುದ್ಯೋಗ ಯುವಕರು ಕೆಲಸದ ನಿರೀಕ್ಷೆಯಲ್ಲಿದ್ದಾರೆ. ಕಂಪನಿಗಳು ಅಗತ್ಯತೆಗೆ ಅನುಗುಣವಾಗಿ ಅರ್ಹ ವಿದ್ಯಾರ್ಥಿಗಳನ್ನು ಕೆಲಸಕ್ಕೆ ನೇಮಕ ಮಾಡಿಕೊಳ್ಳಲಿವೆ. ನೇಮಕವಾದ ಅರ್ಹ ಅಭ್ಯರ್ಥಿಗಳಿಗೆ ಸ್ಥಳದಲ್ಲೇ ನೇಮಕಾತಿ ಪತ್ರ ನೀಡಲಾಗಿದೆ ಎಂದರು.
ಈ ಉದ್ಯೋಗ ಮೇಳದಲ್ಲಿ 1,500 ಕ್ಕೂ ಹೆಚ್ಚು ಜನ ಭಾಗವಹಿಸಿದ್ದರು.
ಈ ವೇಳೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್. ಕೇಶವ ರೆಡ್ಡಿ, ಪ್ರಕಾಶ್ ರೆಡ್ಡಿ, ಭಾರ್ಗವ್ ರೆಡ್ಡಿ, ಹನುಮಂತರೆಡ್ಡಿ, ಬ್ಲಾಕ್ ಕಾಂಗ್ರೆಸ್ ವೇಣು, ತಾರಾನಾಥ್, ವಿ.ರಮೇಶ್, ಗಾಯತ್ರಿ ಬಸವರಾಜ್, ರಫೀಕ್, ಗಿರೀಶ್ ರೆಡ್ಡಿ, ಗಂಗಾಧರಪ್ಪ, ಯುವ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.