ಚಿಕ್ಕಬಳ್ಳಾಪುರ: ‘ಆತ್ಮಹತ್ಯೆ ಮಾಡಿಕೊಂಡಿರುವ ಬಾಬು ಸರ್ಕಾರಿ ಕೆಲಸ ಕೊಡಿಸುವುದಾಗಿ ನನ್ನಿಂದ ₹ 18 ಲಕ್ಷ ಪಡೆದಿದ್ದರು. ಈ ಸಂಬಂಧ ದಾಖಲೆಗಳು ನನ್ನ ಬಳಿ ಇವೆ’ ಎಂದು ಇಡಗೂರಿನ ನಟೇಶ್ ಎಂಬುವವರು ತಿಳಿಸಿದ್ದಾರೆ.
ಈ ಸಂಬಂಧ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಬಾಬು ನನಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ ಸುಳ್ಳು ಆಶ್ವಾಸನೆ ನೀಡಿದ್ದ. ಫೋನ್ ಪೇ, ನಗದು ಮೂಲಕ ಹಣ ಪಡೆದಿದ್ದ. ಇದಕ್ಕೆ ಸಂಬಂಧಿಸಿದಂತೆ ಸಿಸಿ ಟಿವಿ ಕ್ಯಾಮೆರಾ ದಾಖಲೆಗಳು, ಫೋನ್ ಪೇ ಮಾಹಿತಿ ನನ್ನ ಬಳಿ ಇದೆ. ಫೋನ್ ಪೇ ಮೂಲಕವೇ ₹ 5.50 ಲಕ್ಷ ನೀಡಿದ್ದೆ ಎಂದು ತಿಳಿಸಿದ್ದಾರೆ.
ನನಗೆ ಅಧಿಕಾರಿಗಳು ಮತ್ತು ಅವರ ಸಹಾಯಕರು ಗೊತ್ತು. ಕೆಲಸ ಮಾಡಿಸಿಕೊಡುತ್ತೇನೆ ಎಂದು ಭರವಸೆ ನೀಡಿದ್ದ ಎಂದು ನಟೇಶ್ ತಿಳಿಸಿದ್ದಾರೆ.
ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಕಾರು ಚಾಲಕ ಬಾಬು ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರು ಬರೆದಿದ್ದಾರೆ ಎನ್ನಲಾದ ಡೆತ್‌ನೋಟ್ ಆಧರಿಸಿ ಸಂಸದ ಡಾ.ಕೆ.ಸುಧಾಕರ್, ಚಿಕ್ಕಕಾಡಿಗೇನಹಳ್ಳಿ ನಾಗೇಶ್, ಜಿ.ಪಂ ಲೆಕ್ಕಶಾಖೆಯ ಎಸ್‌ಡಿಎ ಮಂಜುನಾಥ್ ವಿರುದ್ಧ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.