ಶಿಡ್ಲಘಟ್ಟ: ಕನ್ನಡ ಸಾಹಿತ್ಯ ಪರಿಷತ್‌ನಿಂದ ಕನ್ನಡ ನಡೆ ಶಾಲೆಗಳ ಕಡೆ ಅಭಿಯಾನದಡಿ ನಗರದ ಸರ್ಕಾರಿ ಪಿಯು ಕಾಲೇಜಿನಲ್ಲಿ ಭಾರತ ರತ್ನ ಸರ್.ಎಂ.ವಿಶ್ವೇಶ್ವರಯ್ಯ ಜನ್ಮದಿನ ಹಾಗೂ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದವರಿಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಯಿತು.
ಕನ್ನಡ ಸಾಹಿತ್ಯ ಸಮ್ಮೇಳನದ ನಿಕಟಪೂರ್ವ ಸಮ್ಮೇಳನ ಅಧ್ಯಕ್ಷ ರೂಪಸಿ ರಮೇಶ್ ಮಾತನಾಡಿ ‘ಸರ್.ಎಂ.ವಿಶ್ವೇಶ್ವರಯ್ಯ ಅವರ ಸತತ ಪರಿಶ್ರಮದಿಂದ ಚಿಕ್ಕಬಳ್ಳಾಪುರ ಮತ್ತು ಕೋಲಾರ ನಡುವೆ ನ್ಯಾರೊ ಗೇಜ್ ರೈಲು ಮಾರ್ಗ ಆರಂಭವಾಗಿತ್ತು’ ಎಂದು ತಿಳಿಸಿದರು.
ವಿಶ್ವೇಶ್ವರಯ್ಯನವರ ಕೊಡುಗೆ ಇಡೀ ಜಗತ್ತಿಗೆ ಇದೆ. ಆದರೆ ಅವರ ಹುಟ್ಟೂರು ಚಿಕ್ಕಬಳ್ಳಾಪುರ ಜಿಲ್ಲೆ ಆಗಿನ ಕೋಲಾರ ಜಿಲ್ಲೆಗೆ ಇರಲಿಲ್ಲ. ಆ ನೋವು ಅವರನ್ನು ಬಹಳವಾಗಿ ಕಾಡುತ್ತಿತ್ತು. ಇಲ್ಲಿ ಯಾವುದೇ ನದಿ ನಾಲೆಗಳಿಲ್ಲದ್ದಕ್ಕೆ ಅವರು ಬಹಳ ಬೇಸತ್ತಿದ್ದರು ಎಂದರು.
ಕೊನೆಗೆ ಮೈಸೂರು ಮಹಾರಾಜರ ಮನವೊಲಿಸಿ ಅವರ ಹುಟ್ಟಿದ ಊರಿನ ಈ ಭಾಗದಲ್ಲಿ ನ್ಯಾರೊ ಗೇಜ್ ರೈಲು ಸಂಚಾರ ಆರಂಭಿಸಿದರು ಎಂದರು.
ಕನ್ನಡ ಸಾಹಿತ್ಯ ಪರಿಷತ್‌ನ ಮಾಜಿ ಜಿಲ್ಲಾಧ್ಯಕ್ಷ ಎಸ್.ವಿ.ನಾಗರಾಜ್‌ರಾವ್ ಅವರು ಆಶಯ ನುಡಿಗಳನ್ನಾಡಿದರು.
ಸರ್.ಎಂ.ವಿಶ್ವೇಶ್ವರಯ್ಯನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪ ನಮನ ಸಲ್ಲಿಸಲಾಯಿತು.
ಕಸಾಪ ತಾಲ್ಲೂಕು ಅಧ್ಯಕ್ಷ ನಾರಾಯಣಸ್ವಾಮಿ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸಿ.ವೆಂಕಟಶಿವಾರೆಡ್ಡಿ, ಎನ್.ಎಸ್.ಎಸ್ ಅಧಿಕಾರಿ ಎಚ್.ಸಿ.ಮುನಿರಾಜು, ಈ ಧರೆ ಪ್ರಕಾಶ್, ಮುನಿನಾರಾಯಣಪ್ಪ, ಟಿ.ಟಿ. ನರಸಿಂಹಪ್ಪ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.