ADVERTISEMENT

‘ರಾಜ್ಯೋತ್ಸವ ನಿತ್ಯೋತ್ಸವವಾಗಲಿ’

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2020, 3:44 IST
Last Updated 8 ನವೆಂಬರ್ 2020, 3:44 IST
ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಕ್ರಾಸ್‌ನಲ್ಲಿ ಜೈಭಾರತ ಮಾತೆ ಆಟೊ ಮಾಲೀಕರು ಹಾಗೂ ಚಾಲಕರ ಕ್ಷೇಮಾಭಿವೃದ್ಧಿ ಸಂಘದಿಂದ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು
ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಕ್ರಾಸ್‌ನಲ್ಲಿ ಜೈಭಾರತ ಮಾತೆ ಆಟೊ ಮಾಲೀಕರು ಹಾಗೂ ಚಾಲಕರ ಕ್ಷೇಮಾಭಿವೃದ್ಧಿ ಸಂಘದಿಂದ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು   

ಶಿಡ್ಲಘಟ್ಟ: ‘ಕನ್ನಡ ರಾಜ್ಯೋತ್ಸವವನ್ನು ಕೇವಲ ಒಂದು ತಿಂಗಳಿಗೆ ಸೀಮಿತಗೊಳಿಸದೆ ನಿತ್ಯೋತ್ಸವವಾಗಿ ಆಚರಿಸಬೇಕು’ ಎಂದು ತಾಲ್ಲೂಕು ಒಕ್ಕಲಿಗರ ಯುವ ಸೇನೆಯ ಗೌರವಾಧ್ಯಕ್ಷ ಎಚ್.ಜಿ. ಶಶಿಕುಮಾರ್ ಕರೆ ನೀಡಿದರು.

ತಾಲ್ಲೂಕಿನ ಜಂಗಮಕೋಟೆ ಕ್ರಾಸ್‌ನಲ್ಲಿ ಜೈಭಾರತ ಮಾತೆ ಆಟೊ ಮಾಲೀಕರು ಹಾಗೂ ಚಾಲಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕನ್ನಡ ರಾಜ್ಯೋತ್ಸವ ಕೇವಲ ನವೆಂಬರ್ ತಿಂಗಳಿಗೆ ಸೀಮಿತಗೊಳಿಸುವ ಮನೋಭಾವ ಬದಲಾಗಬೇಕು. ನಾಡಿನ ನೆಲ, ಜಲ, ಸಂಸ್ಕೃತಿ, ಭಾಷೆ ಹಾಗೂ ಸಾಹಿತ್ಯವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಎಲ್ಲರೂ ಸಾಮೂಹಿಕವಾಗಿ ಕೈಜೋಡಿಸಬೇಕು ಎಂದರು.

ADVERTISEMENT

ಕಾರ್ಯಕ್ರಮದಲ್ಲಿ ಮೆಡಿಕಲ್ ಸ್ಟೋರ್ ಆಂಜಿನೇಯರೆಡ್ಡಿ, ಚೇತನ ಹಾರ್ಡ್‌ವೇರ್ಸ್‌ನ ಎಚ್.ಎನ್. ಮಹೇಶ್, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಚನ್ನಕೃಷ್ಣಪ್ಪ, ಹೊಸಪೇಟೆ ನಾರಾಯಣಸ್ವಾಮಿ, ಜೈಭಾರತ ಮಾತೆ ಆಟೊ ಮಾಲೀಕರು ಹಾಗೂ ಚಾಲಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಕೃಪಾನಂದ, ಕಾರ್ಯದರ್ಶಿ ಮಂಜುನಾಥ್, ಖಜಾಂಚಿ ದಾದಾಪೀರ್, ಸದಸ್ಯರಾದ ಅಫ್ಸರ್, ಶಿವಣ್ಣ, ಕಮಲೇಶ್, ರಾಮಣ್ಣ(ಗ್ಯಾಸ್), ನಾಗರಾಜ್, ಅಮಜದ್, ನಾಗಣ್ಣ, ಫಯಾಜ್‌ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.