ಚಿಂತಾಮಣಿ: ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಮೇ 5 ರಂದು ಸೋಮವಾರ ಸಂಜೆ 5.30ಕ್ಕೆ ನಗರದ ಶಂಕರ ಮಠದ ಬಳಿಯ ಭಜನೆ ಮಂದಿರದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ ಆಯೋಜಿಸಲಾಗಿದೆ.
ಸಾಹಿತ್ಯ ಪರಿಷತ್ತಿನ ಸದಸ್ಯರು, ಕನ್ನಡಾಭಿಮಾನಿಗಳು, ಕನ್ನಡಪರ ಸಂಘಸಂಸ್ಥೆಗಳ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸುವ ಮೂಲಕ ಸಹಕಾರ ನೀಡಬೇಕು ಎಂದು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎನ್.ವಿ.ಶ್ರೀನಿವಾಸನ್ ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.