ADVERTISEMENT

ಶಿವಸೇನೆ, ಎಂಇಎಸ್ ನಿಷೇಧಕ್ಕೆ ಕರವೇ ಆಗ್ರಹ

​ಪ್ರಜಾವಾಣಿ ವಾರ್ತೆ
Published 22 ಜನವರಿ 2021, 1:34 IST
Last Updated 22 ಜನವರಿ 2021, 1:34 IST
ಬಾಗೇಪಲ್ಲಿ ತಾಲ್ಲೂಕು ಕಚೇರಿ ಮುಂದೆ ಕರ್ನಾಟಕ ರಕ್ಷಣಾ ವೇದಿಕೆ (ಚಲಪತಿಗೌಡ ಬಣ) ಕಾರ್ಯಕರ್ತರು ತಾಲ್ಲೂಕು ಕಚೇರಿ ಶಿರಸ್ತೇದಾರ್ ಸೂರ್ಯನಾರಾಯಣ ಅವರಿಗೆ ಮನವಿ ಪತ್ರ ಸಲ್ಲಿಸಿದರು
ಬಾಗೇಪಲ್ಲಿ ತಾಲ್ಲೂಕು ಕಚೇರಿ ಮುಂದೆ ಕರ್ನಾಟಕ ರಕ್ಷಣಾ ವೇದಿಕೆ (ಚಲಪತಿಗೌಡ ಬಣ) ಕಾರ್ಯಕರ್ತರು ತಾಲ್ಲೂಕು ಕಚೇರಿ ಶಿರಸ್ತೇದಾರ್ ಸೂರ್ಯನಾರಾಯಣ ಅವರಿಗೆ ಮನವಿ ಪತ್ರ ಸಲ್ಲಿಸಿದರು   

ಬಾಗೇಪಲ್ಲಿ: ‘ಕನ್ನಡಿಗರನ್ನು ಕೆಣಕುತ್ತಿರುವ ಎಂಇಎಸ್ ಹಾಗೂ ಶಿವಸೇನೆ ಸಂಘಟನೆಗಳನ್ನು ನಿಷೇಧ ಮಾಡಬೇಕು. ಮಹಾರಾಷ್ಟ್ರದ ಸಿಎಂ ಹಾಗೂ ಸಚಿವರು ಬೆಳಗಾವಿ ಗಡಿಗಳ ಬಗ್ಗೆ ನೀಡಿರುವ ಹೇಳಿಕೆಯನ್ನು ಹಿಂಪಡೆಯಬೇಕು’ ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಚಲಪತಿಗೌಡ ಬಣ) ಕಾರ್ಯಕರ್ತರು ತಾಲ್ಲೂಕು ಕಚೇರಿ ಮುಂದೆ ಪ್ರತಿಭಟಿಸಿದರು.

ವೇದಿಕೆಯ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಎ.ಬಾಬಾಜಾನ್ ಮಾತನಾಡಿ, ‘ನಾಡಿನ ಜನರು ಬಹಳ ಶಾಂತಿಪ್ರಿಯರು. ಮಹಾರಾಷ್ಟ್ರದ ಶಿವಸೇನೆ ಹಾಗೂ ಎಂಇಎಸ್‌ನ ಕೆಲವರು ಇಲ್ಲಸಲ್ಲದ ಗಡಿ ಕ್ಯಾತೆಗಳ ಬಗ್ಗೆ ಮಾತನಾಡುತ್ತಿದ್ದಾರೆ. ಮಹಾರಾಷ್ಟ್ರದ ಸಿಎಂ ರಾಜ್ಯ ಆಕ್ರಮಿತ ಮರಾಠಿ ಭಾಷಿಕ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ವಿಲೀನಗೊಳಿಸಲಾಗುವುದು ಎಂದು ಹೇಳಿಕೆ ನೀಡಿರುವ ಖಂಡನೀಯವಾಗಿದೆ’ ಎಂದರು.

ಪ್ರತಿಭಟನಾ ಸ್ಥಳಕ್ಕೆ ಶಿರಸ್ತೇದಾರ್ ಸೂರ್ಯನಾರಾಯಣ ಬಂದು ಪ್ರತಿಭಟನಾಕಾರರಿಂದ ಮನವಿ ಪತ್ರ ಸ್ವೀಕರಿಸಿದರು.

ADVERTISEMENT

ಕರವೇ ಮುಖಂಡರಾದ ಸುಧಾಕರ್, ಬಿ.ಕೆ.ಸಲೀಂ, ಜೆ.ಸಂತೋಷ್, ವೆಂಕಟೇಶ್, ರಂಗನಾಥ್, ಜಿ.ವಿ.ವೆಂಕಟಶಿವಪ್ಪ, ಷೇಕ್ ಹಿದಾಯುತುಲ್ಲಾ, ಶಾಂತಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.