ADVERTISEMENT

ಚಿಕ್ಕಬಳ್ಳಾಪುರ | ಪಬ್ಲಿಕ್ ಶಾಲೆ: ಚಿಕ್ಕ ಶಾಲೆ ವಿಲೀನಕ್ಕೆ ನಿರ್ದೇಶನ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿವೆ 13 ಕರ್ನಾಟಕ ಪಬ್ಲಿಕ್ ಶಾಲೆಗಳು

​ಪ್ರಜಾವಾಣಿ ವಾರ್ತೆ
Published 12 ನವೆಂಬರ್ 2025, 6:18 IST
Last Updated 12 ನವೆಂಬರ್ 2025, 6:18 IST
<div class="paragraphs"><p>ಶಾಲೆ</p></div>

ಶಾಲೆ

   

(ಸಾಂಕೇತಿಕ ಚಿತ್ರ)

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ 19 ಕರ್ನಾಟಕ ಪಬ್ಲಿಕ್ ಶಾಲೆಗಳಿಂದ 5 ಕಿ.ಮೀ ವ್ಯಾಪ್ತಿ ಒಳಗಿನ ಚಿಕ್ಕ ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳೊಂದಿಗೆ ಸುಲಲಿತವಾಗಿ ಸಮ್ಮಿಳಿತಗೊಳಿಸಲು ಆದೇಶಿಸಲಾಗಿದೆ. ಈ ಸಂಬಂಧ ಡಿಡಿಪಿಐ ಅವರು ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಕ್ಷೇತ್ರ ಸಮನ್ವಯಾಧಿಕಾರಿ ಅವರಿಗೆ ಲಿಖಿತವಾಗಿ ನಿರ್ದೇಶನ ನೀಡಿದ್ದಾರೆ. 

ADVERTISEMENT

2018–19ನೇ ಸಾಲಿನಿಂದ ಜಿಲ್ಲೆಯಲ್ಲಿ 6 ಕರ್ನಾಟಕ ಪಬ್ಲಿಕ್ ಶಾಲೆಗಳು ಅಸ್ತಿತ್ವದಲ್ಲಿ ಇದ್ದವು. 2025–26ನೇ ಸಾಲಿನಲ್ಲಿ ಸರ್ಕಾರ ಜಿಲ್ಲೆಯ 13 ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಉನ್ನತೀಕರಿಸಿ ಆದೇಶಿಸಿದೆ. ಈ ಹಿಂದಿನ ಆರು ಮತ್ತು ಪ್ರಸ್ತುತ 13 ಸೇರಿದಂತೆ ಒಟ್ಟು 19 ಪಬ್ಲಿಕ್ ಶಾಲೆಗಳು ಜಿಲ್ಲೆಯಲ್ಲಿವೆ.

ಈ ಶಾಲೆಗಳಿಂದ 5 ಕಿ.ಮೀ ವ್ಯಾಪ್ತಿ ಒಳಗಿನ ಚಿಕ್ಕ ಸರ್ಕಾರಿ ಶಾಲೆಗಳನ್ನು ಪಬ್ಲಿಕ್ ಶಾಲೆಗಳೊಂದಿಗೆ ವಿಲೀನಕ್ಕೆ ನಿರ್ದೇಶನ ನೀಡಲಾಗಿದೆ.

ಅಲ್ಲದೆ ಹೊಸದಾಗಿ ಮಂಜೂರಾಗಿರುವ 13 ಕೆಪಿಎಸ್ ಶಾಲೆಗಳಿಗೆ ಸಂಬಂಧಿಸಿದಂತೆ ಮೂಲಸೌಲಭ್ಯಗಳು, ಕುಡಿಯುವ ನೀರು, ಶಿಕ್ಷಕರ ಮಾಹಿತಿಯ ನಮೂನೆಯನ್ನು ಲಗತ್ತಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಕ್ಷೇತ್ರ ಸಮನ್ವಯಾಧಿಕಾರಿ ಕಚೇರಿಗೆ ಸಲ್ಲಿಸುವಂತೆ ಡಿಡಿಪಿಐ ಆದೇಶಿಸಿದ್ದಾರೆ.

ಬಾಗೇಪಲ್ಲಿ ಪಟ್ಟಣದ ಬಾಲಕರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆ, ಬಾಗೇಪಲ್ಲಿ ತಾಲ್ಲೂಕಿನ ಚಾಕವೇಲು ಗ್ರಾಮದ ಸರ್ಕಾರಿ ಮಾದರಿ ಪ್ರೌಢಶಾಲೆ, ಪಾತಪಾಳ್ಯ ಸರ್ಕಾರಿ ಪ್ರೌಢಶಾಲೆ, ಗೌರಿಬಿದನೂರು ತಾಲ್ಲೂಕಿನ ಮಿಣಕನಗುರ್ಕಿಯ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ, ಚಿಕ್ಕಬಳ್ಳಾಪುರ ತಾಲ್ಲೂಕಿನ ಪೋಶೆಟ್ಟಹಳ್ಳಿ ಮತ್ತು ದಿಬ್ಬೂರು ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ, ಚಿಂತಾಮಣಿಯ ಬಾಲಕಿಯ ಪದವಿ ಪೂರ್ವ ಕಾಲೇಜು, ಬಟ್ಲಹಳ್ಳಿ, ಯಗವಕೋಟೆ ಸರ್ಕಾರಿ ಪ್ರೌಢಶಾಲೆ, ಗೌರಿಬಿದನೂರು ತಾಲ್ಲೂಕಿನ ಹೊಸೂರು ಸರ್ಕಾರಿ ಶಾಲೆ, ಗೌರಿಬಿದನೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜು, ಶಿಡ್ಲಘಟ್ಟದ ನಗರದ ಸರ್ಕಾರಿ ಪ್ರೌಢಶಾಲೆ, ಸಾದಲಿ ಪದವಿ ಪೂರ್ವ ಕಾಲೇಜುಗಳು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಈ ವರ್ಷ ಉನ್ನತೀಕರಣಗೊಂಡಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.