ಚೇಳೂರು: ಇಲ್ಲಿನ ಪ್ರಸಿದ್ಧ ಶ್ರೀಪ್ರಸನ್ನ ಕಾಶಿ ವಿಶ್ವೇಶ್ವರ ಸ್ವಾಮಿ ದೇವಾಲಯದಲ್ಲಿ ಸೋಮವಾರ ಕಾರ್ತಿಕ ಹುಣ್ಣಿಮೆ ಪ್ರಯುಕ್ತ ವಿಶೇಷ ಪೂಜೆ ನಡೆಯಿತು.
ಬೆಳಿಗ್ಗೆ 5 ಗಂಟೆಯಿಂದಲೇ ಪಟ್ಟಣದ ಅಪಾರ ಸಂಖ್ಯೆಯ ಭಕ್ತರು ದೇವಾಲಯದ ಮುಂಭಾಗ ಸ್ವಾಮಿಯ ದರ್ಶನಕ್ಕೆ ಸರದಿ ಸಾಲಿನಲ್ಲಿ ನಿಂತಿದ್ದರು. ಅರಳಿಕಟ್ಟೆ ಮತ್ತು ನಾಗದೇವತೆಗಳಿಗೆ ದೀಪದಾರತಿ ಸೇವೆ ಸಲ್ಲಿಸಿ ಭಕ್ತಿಭಾವ ಮೆರೆದರು ಮೂಲದೇವರಿಗೆ ವಿವಿಧ ಹೂಗಳಿಂದ ಅಲಂಕಾರ ಮಾಡಲಾಗಿತ್ತು. ನೂರಾರು ಭಕ್ತರು ಕಾಶಿ ವಿಶ್ವೇಶ್ವರ ಸ್ವಾಮಿಯ ದರ್ಶನ
ಪಡೆದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.