
ಶಿಡ್ಲಘಟ್ಟ: ಇಲ್ಲಿಯ ನಗರಸಭೆ ಆಯುಕ್ತೆ ಜಿ.ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ ಕೆಪಿಸಿಸಿ ಸಂಯೋಜಕ ರಾಜೀವ್ ಗೌಡ ಅವರಿಗೆ ಕೆಪಿಸಿಸಿ ಗುರುವಾರ ನೋಟಿಸ್ ನೀಡಿದೆ.
‘ನಿಮ್ಮ ವರ್ತನೆ ಪಕ್ಷಕ್ಕೆ ಮುಜುಗರ ತಂದಿದೆ. ಪಕ್ಷದ ಶಿಸ್ತು ಉಲ್ಲಂಘನೆ ಮಾಡಿರುವುದು ಕಾಣುತ್ತಿದೆ. ಘಟನೆಯ ಬಗ್ಗೆ ಒಂದು ವಾರದ ಒಳಗೆ ಸೂಕ್ತ ಸಮಜಾಯಿಷಿ ನೀಡಬೇಕು. ಇಲ್ಲವಾದಲ್ಲಿ ಶಿಸ್ತು ಸಮಿತಿ ಕ್ರಮ ಕೈಗೊಳ್ಳಲಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್ ನೋಟಿಸ್‌ನಲ್ಲಿ ತಿಳಿಸಿದ್ದಾರೆ.
ಶಿಡ್ಲಘಟ್ಟ ಶಾಸಕ ಬಿ.ಎನ್.ರವಿಕುಮಾರ್ ಮತ್ತು ನಗರಸಭೆ ಆಯುಕ್ತೆ ಅಮೃತಾ ಗೌಡ ದೂರು ಆಧರಿಸಿ ಪೊಲೀಸರು ಈಗಾಗಲೇ ರಾಜೀವ್ ಗೌಡ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಪ್ರಕರಣ ದಾಖಲಾಗುತ್ತಲೇ ರಾಜೀವ್ ಗೌಡ ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕೆ ವಿಶೇಷ ತಂಡ ರಚಿಸಲಾಗಿದೆ ಎನ್ನುವ ವದಂತಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ ತಳ್ಳಿ ಹಾಕಿದ್ದಾರೆ. ‘ರಾಜೀವ್ ಗೌಡ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ವಿಚಾರಣೆ ನಡೆಯಬೇಕಿದೆ. ಅವರ ಪತ್ತೆಗೆ ಯಾವುದೇ ತಂಡವನ್ನೂ ರಚಿಸಿಲ್ಲ ಎಂದು ‘ಪ್ರಜಾವಾಣಿ’ಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.