ಶಿಡ್ಲಘಟ್ಟ: ಶಿಡ್ಲಘಟ್ಟದಿಂದ ದಿಬ್ಬೂರಹಳ್ಳಿ ಕಡೆಗೆ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ವ್ಯಕ್ತಿಯೊಬ್ಬ ಕುಸಿದು ಬಿದ್ದು, ಮೃತಪಟ್ಟಿರುವ ಘಟನೆ ನಗರದಲ್ಲಿ ಗುರುವಾರ ನಡೆದಿದೆ.
ತಾಲ್ಲೂಕಿನ ರಾಮಲಿಂಗಪುರದ ಗಾರೆ ಕೆಲಸಗಾರ ಪಿಳ್ಳವೆಂಕಟರಮಣಪ್ಪ ಮೃತ ವ್ಯಕ್ತಿ.
ಅನಾರೋಗ್ಯದಿಂದ ಬಳಲುತ್ತಿದ್ದ ಪಿಳ್ಳವೆಂಕಟರಮಣಪ್ಪ, ಗುರುವಾರ ಬೆಳಗ್ಗೆ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ವಾಪಸ್ ಗ್ರಾಮಕ್ಕೆ ತೆರಳುತ್ತಿದ್ದರು. ಆದರೆ, ಬಸ್ ತಾಲ್ಲೂಕು ಕಚೇರಿ ಮುಂಭಾಗ ತೆರಳುತ್ತಿದ್ದಂತೆ ವ್ಯಕ್ತಿ ಕುಸಿದುಬಿದ್ದಿದ್ದಾರೆ. ಅವರನ್ನು ಬಸ್ ಚಾಲಕ ಮತ್ತು ಪ್ರಯಾಣಿಕರು, ಆಸ್ಪತ್ರೆಗೆ ಕರೆದೊಯ್ದರು. ಆದರೆ, ಅಷ್ಟೊತ್ತಿಗಾಗಲೇ ಪ್ರಯಾಣಿಕ ಮೃತಪಟ್ಟಿದ್ದಾನೆ ಎಂದು ವೈದ್ಯರು ದೃಢಪಡಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.