ಗುಡಿಬಂಡೆ: ತಾಲ್ಲೂಕಿನ ನುಲಿಗುಂಬ ಗ್ರಾಮದಲ್ಲಿ ಜಮೀನಿನ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರು ಅನುಮಾನಾಸ್ಪದ ಸ್ಥಿತಿಯಲ್ಲಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ.
ಮೃತರನ್ನು ನುಲಿಗುಂಬ ಗ್ರಾಮದ ಅಶ್ವತ್ಥಪ್ಪ (48) ಎಂದು ಗುರುತಿಸಲಾಗಿದೆ.
ಶುಕ್ರವಾರ ಬೆಳಿಗ್ಗೆ ಗುಡಿಬಂಡೆ ತಾಲ್ಲೂಕಿನ ನುಲಿಗುಂಬ ಗ್ರಾಮದಲ್ಲಿ ಜಮೀನು ವಿಚಾರವಾಗಿ ನಾಗರಾಜಾಚಾರಿ ಹಾಗೂ ಅಶ್ವತ್ಥಪ್ಪ ಎಂಬವರ ನಡುವೆ ಗಲಾಟೆ ನಡೆಯುತ್ತಿರುವಾಗ ಸ್ಥಳದಲ್ಲಿಯೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಮೃತದೇಹವನ್ನು ಬಾಗೇಪಲ್ಲಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಘಟನಾ ಸ್ಥಳಕ್ಕೆ ಗುಡಿಬಂಡೆ ಪೊಲೀಸ್ ಸಬ್‌ಇನ್‌ಸ್ಪೆಕ್ಟರ್ ಗಣೇಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.