ADVERTISEMENT

ವ್ಯವಹಾರದಲ್ಲಿ ಕನ್ನಡ ಬಳಕೆಯಿಂದ ಭಾಷೆ ಉಳಿವು

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2021, 5:45 IST
Last Updated 2 ನವೆಂಬರ್ 2021, 5:45 IST
ಶಿಡ್ಲಘಟ್ಟದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಕನ್ನಡ ವಿಷಯದಲ್ಲಿ 125ಕ್ಕೆ 125 ಅಂಕ ಪಡೆದ ವಿದ್ಯಾರ್ಥಿಗಳಿಗೆ ಶಾಸಕ ಮುನಿಯಪ್ಪ ಪ್ರಶಂಸಾ ಪತ್ರ ನೀಡಿದರು
ಶಿಡ್ಲಘಟ್ಟದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಕನ್ನಡ ವಿಷಯದಲ್ಲಿ 125ಕ್ಕೆ 125 ಅಂಕ ಪಡೆದ ವಿದ್ಯಾರ್ಥಿಗಳಿಗೆ ಶಾಸಕ ಮುನಿಯಪ್ಪ ಪ್ರಶಂಸಾ ಪತ್ರ ನೀಡಿದರು   

ಶಿಡ್ಲಘಟ್ಟ: ಕನ್ನಡ ನಾಡು, ನುಡಿಯ ರಕ್ಷಣೆ ಹಾಗೂ ಗಡಿಭಾಗಗಳ ರಕ್ಷಣೆ ಪ್ರತಿಯೊಬ್ಬ ಯುವಕರ ಆದ್ಯ ಕರ್ತವ್ಯವಾಗಿದೆ ಎಂದು ಶಾಸಕ ವಿ.ಮುನಿಯಪ್ಪ ಹೇಳಿದರು.

ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ 66ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಮಾತನಾಡಿದರು.

ನೆರೆ ರಾಜ್ಯಗಳಿಗೆ ಹೋದರೆ ಅಲ್ಲಿನ ಸ್ಥಳೀಯ ಭಾಷೆಯಲ್ಲಿಯೆ ವ್ಯವಹರಿಸಬೇಕಾಗುತ್ತದೆ. ಪ್ರಾಚೀನ ಭಾಷೆಯಾದ ಕನ್ನಡವನ್ನು ನಮ್ಮ ರಾಜ್ಯದ ಗಡಿ ಭಾಗಗಳಲ್ಲಿ ಉಳಿಸಿಕೊಳ್ಳಲು ಹೋರಾಟದ ಹಾದಿ ಹಿಡಿದಿರುವುದು ನಿಜಕ್ಕೂ ಶೋಚನೀಯ ಸಂಗತಿಯಾಗಿದೆ ಎಂದರು.

ADVERTISEMENT

ವರ್ಷಕ್ಕೊಮ್ಮೆ ರಾಜ್ಯೋತ್ಸವದ ಹೆಸರಿನಲ್ಲಿ ಹಬ್ಬ ಆಚರಿಸಿದ ಮಾತ್ರಕ್ಕೆ ಭಾಷೆ ಉಳಿಯುವುದಿಲ್ಲ. ಬದಲಿಗೆ ಪ್ರತಿಯೊಬ್ಬರೂ ಕನ್ನಡ ಭಾಷೆಯನ್ನು ಮಾತನಾಡುವುದು ಸೇರಿದಂತೆ ಮಾತೃಭಾಷೆಯಲ್ಲಿ ವ್ಯವಹರಿಸಿದಾಗ ಮಾತ್ರ ಭಾಷೆ ಉಳಿಯುತ್ತದೆ ಎಂದರು.

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕನ್ನಡದಲ್ಲಿ 125ಕ್ಕೆ 125 ಅಂಕ ಪಡೆದ ವಿದ್ಯಾರ್ಥಿಗಳು ಸೇರಿದಂತೆ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ನಡೆದ ಕ್ರೀಡಾಕೂಟದಲ್ಲಿ ವಿಜೇತರಾಗಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ನೌಕರರನ್ನು ಸನ್ಮಾನಿಸಲಾಯಿತು.

ನಗರಸಭೆ ಪೌರಾಯುಕ್ತ ಆರ್.ಶ್ರೀಕಾಂತ್, ಕ್ಷೇತ್ರ ಶಿಕ್ಷಣಾಧಿಕಾರಿ ಆಂಜನೇಯಲು, ಶಿರಸ್ತೇದಾರ್ ಕೆ.ಎನ್.ಮಂಜುನಾಥ್, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಕೆ.ಎನ್.ಸುಬ್ಬಾರೆಡ್ಡಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.