
ನಂದಿಬೆಟ್ಟದ ಟಿಪ್ಪು ಬೇಸಿಗೆ ಅರಮನೆ ಮೇಲೆ ಲಾರೆನ್ಸ್ ಬಿಷ್ಣೋಯ್ ಹೆಸರು ಕೆತ್ತನೆ!
ಚಿಕ್ಕಬಳ್ಳಾಪುರ: ತಾಲ್ಲೂಕಿನ ನಂದಿಗಿರಿಧಾಮದ ಪ್ರಸಿದ್ಧ ಟಿಪ್ಪು ಬೇಸಿಗೆ ಅರಮನೆಯ ಮೇಲೆ ಅಂತರರಾಷ್ಟ್ರೀಯ ಪಾತಕಿ ಲಾರೆನ್ಸ್ ಬಿಷ್ಣೋಯ್ ಹೆಸರು ಬರೆಯಲಾಗಿದೆ. ಇದು ಪ್ರವಾಸಿಗರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.
ಲ್ಯಾರೆನ್ಸ್ ಬಿಷ್ಣೋಯ್ ಹೆಸರಿನ ನಡುವೆ ಪ್ರೀತಿಯ ಸಂಕೇತವನ್ನೂ ಬರೆಯಲಾಗಿದೆ. ಟಿಪ್ಪು ಬೇಸಿಗೆ ಅರಮನೆಯು ಪುರಾತತ್ವ ಇಲಾಖೆಗೆ ಸೇರಿದೆ.
ಸದಾ ಜನಜಂಗುಳಿಯಿಂದ ತುಂಬಿ ತುಳುಕುವ ಮತ್ತು ಗಿರಿಧಾಮದ ಪ್ರವೇಶದಲ್ಲಿಯೇ ಇರುವ ಬೇಸಿಗೆ ಅರಮನೆಯ ಮೇಲೆ ಈ ಬರಹ ಬರೆದವರು ಯಾರು ಎನ್ನುವುದು ಚರ್ಚೆಗೆ ಒಳಗಾಗಿದೆ.
ನಂದಿಗಿರಿಧಾಮ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಈ ಬರಹದ ಮೇಲೆ ಬಣ್ಣ ಬಳಿದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.