ADVERTISEMENT

ಲಾಕ್‌ಡೌನ್‌ ಉಲ್ಲಂಘನೆ: ಆಯೋಜಕರ ವಿರುದ್ಧ ತಾಲ್ಲೂಕು ಆಡಳಿತ ದೂರು

​ಪ್ರಜಾವಾಣಿ ವಾರ್ತೆ
Published 4 ಜೂನ್ 2020, 9:53 IST
Last Updated 4 ಜೂನ್ 2020, 9:53 IST
ಶಿಡ್ಲಘಟ್ಟದ ಡಾಲ್ಫಿನ್ ಕಾಲೇಜಿನ ಆವರಣದಲ್ಲಿ ಮೇ 27 ರಂದು ಟೌನ್ ರೇಷ್ಮೆ ಬೆಳೆಗಾರರ ಹಾಗೂ ರೈತರ ವ್ಯವಸಾಯ ಸೇವಾ ಸಹಕಾರ ಸಂಘ(ಎಸ್.ಎಫ್.ಸಿ.ಎಸ್ )ದ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಮಹಿಳೆಯರು
ಶಿಡ್ಲಘಟ್ಟದ ಡಾಲ್ಫಿನ್ ಕಾಲೇಜಿನ ಆವರಣದಲ್ಲಿ ಮೇ 27 ರಂದು ಟೌನ್ ರೇಷ್ಮೆ ಬೆಳೆಗಾರರ ಹಾಗೂ ರೈತರ ವ್ಯವಸಾಯ ಸೇವಾ ಸಹಕಾರ ಸಂಘ(ಎಸ್.ಎಫ್.ಸಿ.ಎಸ್ )ದ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಮಹಿಳೆಯರು   

ಶಿಡ್ಲಘಟ್ಟ: ಕೋವಿಡ್ 19 ನಿಯಂತ್ರಣಕ್ಕೆ ವಿಧಿಸಿರುವ ನಿರ್ಬಂಧಗಳನ್ನು ಪಾಲಿಸದೇ ಟೌನ್ ಎಸ್‌ಎಫ್‌ಸಿಎಸ್ ಸಂಘದವರು ಕಾರ್ಯಕ್ರಮ ಆಯೋಜಿಸಿರುವ ಬಗ್ಗೆ ತಹಶೀಲ್ದಾರ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪಟ್ಟಣದ ಡಾಲ್ಫಿನ್ ಕಾಲೇಜು ಆವರಣದಲ್ಲಿ ಮೇ 27ರಂದು ಟೌನ್ ರೇಷ್ಮೆ ಬೆಳೆಗಾರರ ಹಾಗೂ ರೈತರ ವ್ಯವಸಾಯ ಸೇವಾ ಸಹಕಾರ ಸಂಘದಿಂದ (ಎಸ್ಎಫ್‌ಸಿಎಸ್) 42 ಸಂಘಗಳಿಗೆ ₹ 2. 25 ಕೋಟಿ ಬಡ್ಡಿರಹಿತ ಸಾಲ ವಿತರಣೆ ಮಾಡಲಾಗಿತ್ತು. ಸುಮಾರು 500 ಮಂದಿ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಕಾರ್ಯಕ್ರಮಕ್ಕೆ ಅನುಮತಿ ಪಡೆಯದಿರುವುದು, ಅಂತರ ಕಾಯ್ದುಕೊಳ್ಳದಿರುವುದು ಹಾಗೂ ಮಾಸ್ಕ್ ಧರಿಸದೇ ಕೋವಿಡ್ 19 ತಡೆಗಟ್ಟಲು ವಿಧಿಸಿರುವ ನಿರ್ಬಂಧಗಳನ್ನು ಪಾಲಿಸದಿರುವ ಬಗ್ಗೆ ಆಯೋಜಕರ ಮೇಲೆ ದೂರು ದಾಖಲಾಗಿದೆ.

ADVERTISEMENT

ಡಿಸಿಸಿ ಬ್ಯಾಂಕ್‌ನಿಂದ ಸ್ತ್ರೀಶಕ್ತಿ ಸಂಘಗಳಿಗೆ ನೀಡುತ್ತಿರುವ ಬಡ್ಡಿ ರಹಿತ ಸಾಲ ವಿತರಣಾ ಕಾರ್ಯಕ್ರಮವು ತಾಲ್ಲೂಕಿನ ಸಾದಲಿ, ವೈ.ಹುಣಸೇನಹಳ್ಳಿ, ಮಳ್ಳೂರು, ನಗರದ ಡಾಲ್ಫಿನ್ ವಿದ್ಯಾ ಸಂಸ್ಥೆ ಮತ್ತು ಮಳಮಾಚನಹಳ್ಳಿಯಲ್ಲಿ ನಡೆದಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.