ADVERTISEMENT

ಗುಡಿಬಂಡೆ | ಲೋಕ ಅದಾಲತ್: 328 ಪ್ರಕರಣ ಇತ್ಯರ್ಥ

​ಪ್ರಜಾವಾಣಿ ವಾರ್ತೆ
Published 9 ಮಾರ್ಚ್ 2025, 14:27 IST
Last Updated 9 ಮಾರ್ಚ್ 2025, 14:27 IST
ಕರ್ನಾಟಕ ರಾಜ್ಯ ಕಾನೂನು ಮತ್ತು ಸೇವೆಗಳ ಪ್ರಾಧಿಕಾರ ನಿರ್ದೇಶನದ ಮೇರೆಗೆ ಗುಡಿಬಂಡೆ ಜೆಎಂಎಫ್‌ಸಿ ಮತ್ತು ಸಿವಿಲ್ ನ್ಯಾಯಾಲಯದಲ್ಲಿ ಲೋಕ ಅದಾಲತ್
ಕರ್ನಾಟಕ ರಾಜ್ಯ ಕಾನೂನು ಮತ್ತು ಸೇವೆಗಳ ಪ್ರಾಧಿಕಾರ ನಿರ್ದೇಶನದ ಮೇರೆಗೆ ಗುಡಿಬಂಡೆ ಜೆಎಂಎಫ್‌ಸಿ ಮತ್ತು ಸಿವಿಲ್ ನ್ಯಾಯಾಲಯದಲ್ಲಿ ಲೋಕ ಅದಾಲತ್   

ಗುಡಿಬಂಡೆ: ಕರ್ನಾಟಕ ರಾಜ್ಯ ಕಾನೂನು ಮತ್ತು ಸೇವೆಗಳ ಪ್ರಾಧಿಕಾರ ನಿರ್ದೇಶನದ ಮೇರೆಗೆ ಗುಡಿಬಂಡೆ ಜೆಎಂಎಫ್‌ಸಿ ಮತ್ತು ಸಿವಿಲ್ ನ್ಯಾಯಾಲಯದಲ್ಲಿ ಲೋಕ ಅದಾಲತ್ ಹಮ್ಮಿಕೊಳ್ಳಲಾಯಿತು. 

ನ್ಯಾಯಾಧೀಶ ಹರೀಶ್ ಕೆ.ಎಂ. ನೇತೃತ್ವದಲ್ಲಿ ನಡೆದ ಅದಾಲತ್‌ನಲ್ಲಿ ಒಟ್ಟಾರೆ 328 ಪ್ರಕರಣಗಳನ್ನು ಇತ್ಯರ್ಥಪಡಿಸಲಾಯಿತು. ಈ ಪೈಕಿ ಏಳು ಚೆಕ್ ಬೌನ್ಸ್ ಪ್ರಕರಣಗಳಿಂದ ₹13.32 ಲಕ್ಷ ರೂಪಾಯಿ ಸಂದಾಯವಾಯಿತು. ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದ 23 ಪ್ರಕರಣಗಳಲ್ಲಿ 1.03 ಲಕ್ಷ ದಂಡ ವಸೂಲಿ ಆಯಿತು. 12 ಸಿವಿಲ್ ಪ್ರಕರಣಗಳಿಂದ ₹16.15 ಲಕ್ಷ ಸಂಗ್ರಹವಾಗಿದೆ ಎಂದು ಮಾಹಿತಿ ನೀಡಲಾಯಿತು. 

ಇದೇ ಸಂದರ್ಭದಲ್ಲಿ 273 ಶಾಲಾ ಮಕ್ಕಳಿಗೆ ಜನನ ಪ್ರಮಾಣಪತ್ರಗಳನ್ನು ವಿತರಿಸಲಾಯಿತು. 

ADVERTISEMENT

ಈ ಸಂದರ್ಭದಲ್ಲಿ ತಹಶೀಲ್ದಾರ್ ಸಿಗ್ಬತುಲ್ಲಾ, ವಕೀಲರ ಸಂಘದ ಅಧ್ಯಕ್ಷ ಟಿ. ಅಶ್ವತ್ ರೆಡ್ಡಿ, ಉಪಾಧ್ಯಕ್ಷ ಕೆ.ಆರ್ ಮಂಜುನಾಥ್, ಕಾರ್ಯದರ್ಶಿ ಸಿ.ವಿ. ಮಂಜುನಾಥ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವ್ಯವಸ್ಥಾಪಕ ಸಂದೀಪ್ ಹಾಜರಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.