ADVERTISEMENT

ಗೌರಿಬಿದನೂರು | ನೈರ್ಮಲ್ಯ ಇಲಾಖೆ ಎಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ

​ಪ್ರಜಾವಾಣಿ ವಾರ್ತೆ
Published 29 ಜುಲೈ 2025, 5:14 IST
Last Updated 29 ಜುಲೈ 2025, 5:14 IST
<div class="paragraphs"><p>ಅಂಜನಮೂರ್ತಿ</p></div>

ಅಂಜನಮೂರ್ತಿ

   

ಚಿಕ್ಕಬಳ್ಳಾಪುರ: ಗೌರಿಬಿದನೂರು ತಾಲ್ಲೂಕಿನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಂಜಿನಿಯರ್ ಅಂಜನಮೂರ್ತಿ ಅವರ ನಿವಾಸ ಮತ್ತು ಕಚೇರಿಯ ಮೇಲೆ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಲೋಕಾಯುಕ್ತ ಇನ್‌ಸ್ಪೆಕ್ಟರ್ ಬಸವರಾಜು ನೇತೃತ್ವದ ತಂಡ ಈ ದಾಳಿ ಮಾಡಿದೆ.

ADVERTISEMENT

ಬೆಂಗಳೂರಿನ ಯಲಹಂಕ, ಜಕ್ಕೂರು, ಮಧುಗಿರಿಯಲ್ಲಿರುವ ಅಂಜನ ಅವರ ನಿವಾಸದ ಮೇಲೆಯೂ ದಾಳಿ ನಡೆದಿದೆ.

ಬೆಳಿಗ್ಗೆ 6ರ ವೇಳೆಗೆ ಮನೆಯಲ್ಲಿ ಶೋಧ ಕಾರ್ಯ ಪೂರ್ಣಗೊಳಿಸಿದ ಅಧಿಕಾರಿಗಳು 9ರ ನಂತರ ಕಚೇರಿಯಲ್ಲಿ ಕಡತಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.