ADVERTISEMENT

ಗುಡಿಬಂಡೆ: ಲೋಕಾಯುಕ್ತದಿಂದ ಕುಂದು ಕೊರತೆ ಸಭೆ

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2023, 5:50 IST
Last Updated 1 ಏಪ್ರಿಲ್ 2023, 5:50 IST
ಪಟ್ಟಣದ ತಾಲ್ಲೂಕು ಪಂಚಾಯಿತಿಯಲ್ಲಿ ಶುಕ್ರವಾರ ನಡೆದ ಸಾರ್ವಜನಿಕರ ಕುಂದು ಕೊರತೆ ಸಭೆಯಲ್ಲಿ ರೈತರು ಲೋಕಾಯುಕ್ತ ಅಧಿಕಾರಿಗೆ ದೂರು ನೀಡುತ್ತಿರುವುದು
ಪಟ್ಟಣದ ತಾಲ್ಲೂಕು ಪಂಚಾಯಿತಿಯಲ್ಲಿ ಶುಕ್ರವಾರ ನಡೆದ ಸಾರ್ವಜನಿಕರ ಕುಂದು ಕೊರತೆ ಸಭೆಯಲ್ಲಿ ರೈತರು ಲೋಕಾಯುಕ್ತ ಅಧಿಕಾರಿಗೆ ದೂರು ನೀಡುತ್ತಿರುವುದು   

ಗುಡಿಬಂಡೆ: ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಲೋಕಾಯುಕ್ತವು ಸಾರ್ವಜನಿಕ ಕುಂದುಕೊರತೆ ಸಭೆ ಹಮ್ಮಿಕೊಳ್ಳಲಾಯಿತು.

ಲೋಕಾಯುಕ್ತ ಇನ್‌ಸ್ಪೆಕ್ಟರ್ ಮೋಹನ್ ಹೆಡ್ಣನವರ್ ಮಾತನಾಡಿ, ‘ಸಾರ್ವಜನಿಕರು ತಮ್ಮ ಸರ್ಕಾರಿ ಕೆಲಸ ಮಾಡಿಕೊಡಲು ಸಂಬಂಧಪಟ್ಟ ಅಧಿಕಾರಿಗಳು ಹಣಕ್ಕೆ ಬೇಡಿಕೆಯಿಟ್ಟರೆ, ನಮಗೆ ದೂರು ನೀಡಿ. ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಅಧಿಕಾರಿಗಳು ಸಹ ಸಾರ್ವಜನಿಕರ ಕೆಲಸಗಳನ್ನು ವಿಳಂಬ ಮತ್ತು ಹಣಕ್ಕೆ ಒತ್ತಾಯಿಸದೆ, ಮಾಡಿಕೊಡಬೇಕು’ ಎಂದು ಸೂಚನೆ ನೀಡಿದರು.

ತಾಲ್ಲೂಕು ಕೇಂದ್ರದಲ್ಲಿ ಪ್ರತಿ ವಾರ ಕುಂದುಕೊರತೆಗಳ ಸಭೆ ನಡೆಸಲಾಗುತ್ತದೆ. ಸಾರ್ವಜನಿಕರು ಲಿಖಿತ ರೂಪದಲ್ಲಿ ತಮ್ಮ ಸಮಸ್ಯೆಯ ಬಗ್ಗೆ ದೂರು ನೀಡಬಹುದು. ಯಾವುದೇ ಸರ್ಕಾರಿ ಅಧಿಕಾರಿ ಸಾವರ್ಜನಿಕರ ನ್ಯಾಯಬದ್ಧ ಕೆಲಸ ಮಾಡಿಕೊಡಲು ಹಣಕ್ಕೆ ಒತ್ತಾಯಿಸಿದರೆ, ಲೋಕಾಯುಕ್ತ ಕಚೇರಿಗೆ ಸಂಪರ್ಕಿಸಬಹುದು ಎಂದು ಸಲಹೆ ನೀಡಿದರು.

ADVERTISEMENT

ರೈತ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ ಮಾತನಾಡಿ, ತಾಲ್ಲೂಕು ಕಚೇರಿಯ ರೆಕಾರ್ಡ್ ಸೆಕ್ಷನ್‌ನಲ್ಲಿ ಸರಿಯಾಗಿ ಅಧಿಕಾರಿಗಳು ಸರಿಯಾಗಿ ಸ್ಪಂದಿಸುವುದಿಲ್ಲ. ನಮ್ಮ ದಾಖಲೆಗಳನ್ನು ನೀಡಲು ಕೇಳಿದರೆ, ದಾಖಲೆ ಇಲ್ಲ ಎಂಬ ಹಿಂಬರಹ ನೀಡುತ್ತಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಸಾರ್ವಜನಿಕ ಕುಂದು ಕೊರತೆ ಸಭೆಯಲ್ಲಿ ಕಂದಾಯ ಇಲಾಖೆಗೆ ಸೇರಿದ ದೂರುಗಳು ಹೆಚ್ಚು ಬಂದವು. ಈ ವೇಳೆ ತಹಶೀಲ್ದಾರ್ ಮನಿಷಾ, ತಾಲ್ಲೂಕು ಪಂಚಾಯಿತಿ ಇ.ಒ ಡಾ. ಬಿಂದು, ಬಿಇಒ ಮುನೇಗೌಡ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಾರ್ವಜನಿಕರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.