ADVERTISEMENT

ಪ್ರೀತಿಗೆ ಪೋಷಕರ ವಿರೋಧ: ಉಪನ್ಯಾಸಕ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2021, 2:04 IST
Last Updated 12 ಮಾರ್ಚ್ 2021, 2:04 IST
ಮುರಳಿ
ಮುರಳಿ   

ಶಿಡ್ಲಘಟ್ಟ: ಫಲಿಚೇರ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೋಮನಹಳ್ಳಿ ಗ್ರಾಮದ ಉಪನ್ಯಾಸಕ ಮುರಳಿ (31) ಗುರುವಾರ ಹುಣಸೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಂಗಳೂರಿನ ಖಾಸಗಿ ಕಾಲೇಜೊಂದರಲ್ಲಿ ಉಪನ್ಯಾಸಕನಾಗಿ ಕೆಲಸ ಮಾಡುತ್ತಿದ್ದ ಮುರಳಿ, ಪಕ್ಕದ ಗ್ರಾಮದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಇವರಿಬ್ಬರ ಪ್ರೀತಿಗೆ ಪೋಷಕರವಿರೋಧವಿದ್ದ ಕಾರಣದಿಂದ ಮನನೊಂದು ಮುರಳಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ದಿಬ್ಬೂರಹಳ್ಳಿ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT