ADVERTISEMENT

ಉತ್ತಮ ಫಲಿತಾಂಶ

​ಪ್ರಜಾವಾಣಿ ವಾರ್ತೆ
Published 15 ನವೆಂಬರ್ 2020, 2:13 IST
Last Updated 15 ನವೆಂಬರ್ 2020, 2:13 IST

ಚಿಂತಾಮಣಿ: ನಗರದ ಸರ್ಕಾರಿ ಮಹಿಳಾ ಕಾಲೇಜಿನ ಸ್ನಾತಕೋತ್ತರ(ಎಂ.ಎ) ಇತಿಹಾಸ ವಿಭಾಗಕ್ಕೆಸತತ 3ನೇ ಬಾರಿಗೆ ಶೇಕಡ 100ರಷ್ಟು ಫಲಿತಾಂಶ ಬಂದಿದೆ ಎಂದು ಇತಿಹಾಸ ವಿಭಾಗದ ಮುಖ್ಯಸ್ಥ ಡಾ.ಎಂ.ಎನ್. ರಘು ತಿಳಿಸಿದ್ದಾರೆ.

ವಿಭಾಗದಲ್ಲಿ 13 ಮಂದಿ ಪರೀಕ್ಷೆ ಬರೆದಿದ್ದು, 11 ಮಂದಿ ಅತ್ಯುತ್ತಮ ಶ್ರೇಣಿಯಲ್ಲಿ ಹಾಗೂ ಇಬ್ಬರು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಉತ್ತಮ ಫಲಿತಾಂಶ ಪಡೆಯುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ ಎಂದು ತಿಳಿಸಿದ್ದಾರೆ.

‘ಸರ್ಕಾರಿ ಮಹಿಳಾ ಕಾಲೇಜು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದಲ್ಲಿ ಪ್ರತಿವರ್ಷ ಉತ್ತಮ ಫಲಿತಾಂಶದ ದಾಖಲೆ ಹೊಂದಿದೆ. ಇತಿಹಾಸ ವಿಭಾಗದ ಎಲ್ಲ ಪ್ರಾಧ್ಯಾಪಕರು ಮತ್ತು ಸಿಬ್ಬಂದಿಯ ಪರಿಶ್ರಮ ಹಾಗೂ ವಿದ್ಯಾರ್ಥಿನಿಯರ ಸತತ ಅಭ್ಯಾಸದಿಂದ ಈ ಸಾಧನೆ ಸಾಧ್ಯವಾಗಿದೆ’ ಎಂದು ಪ್ರಾಂಶುಪಾಲ ಪ್ರೊ.ಕೆ.ಆರ್. ಶಿವಶಂಕರ ಪ್ರಸಾದ್ ಮೆಚ್ಚುಗೆ ಸೂಚಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.