ADVERTISEMENT

ಗೌರಿಬಿದನೂರು: ಮಧುಗಿರಿ ರಸ್ತೆ ಅಭಿವೃದ್ಧಿಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2025, 5:30 IST
Last Updated 11 ನವೆಂಬರ್ 2025, 5:30 IST
ಗೌರಿಬಿದನೂರು ನಗರದ ಮಧುಗಿರಿ ರಸ್ತೆ ಅಭಿವೃದ್ಧಿಗಾಗಿ ರಾಷ್ಟೀಯ ಹೆದ್ದಾರಿ ಪ್ರಾಧಿಕಾರದವರು ಪಂಚಾಯಿತಿ ಕಟ್ಟಡಗಳನ್ನು ತೆರವುಗೊಳಿಸಿದರು
ಗೌರಿಬಿದನೂರು ನಗರದ ಮಧುಗಿರಿ ರಸ್ತೆ ಅಭಿವೃದ್ಧಿಗಾಗಿ ರಾಷ್ಟೀಯ ಹೆದ್ದಾರಿ ಪ್ರಾಧಿಕಾರದವರು ಪಂಚಾಯಿತಿ ಕಟ್ಟಡಗಳನ್ನು ತೆರವುಗೊಳಿಸಿದರು   

ಗೌರಿಬಿದನೂರು: ಗೌರಿಬಿದನೂರು–ಮಧುಗಿರಿ ರಸ್ತೆ ಅಭಿವೃದ್ಧಿಗಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಸೋಮವಾರ ರಸ್ತೆಗೆ ಅಡ್ಡಲಾಗಿದ್ದ ಹಲವು ಕಟ್ಟಡಗಳನ್ನು ತೆರವುಗೊಳಿಸಿದೆ. ಈ ಮೂಲಕ ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದಂತಾಗಿದೆ. 

ನಗರದ ಉತ್ತರ ಪಿನಾಕಿನಿ ನದಿ ದಡದ ಬಳಿಯಿಂದ ಮಧುಗಿರಿ ರಸ್ತೆಯ ರೈಲ್ವೆ ಮೇಲುಸೇತುವೆವರೆಗೆ 80 ಅಡಿಗಳ ರಸ್ತೆ ಅಭಿವೃದ್ಧಿಗೆ ಈಗಾಗಲೇ ರಸ್ತೆಯ ಮಧ್ಯಭಾಗದಿಂದ 40 ಅಡಿಗಳಿಗೆ ಗುರುತು ಮಾಡಲಾಗಿದೆ. ರಸ್ತೆಗೆ ಅಡ್ಡಲಾಗಿರುವ ಕಟ್ಟಡಗಳನ್ನು ಸ್ವಯಂಪ್ರೇರಿತವಾಗಿ ತೆರವುಗೊಳಿಸಬೇಕು ಎಂದು ಮಾಲೀಕರಿಗೆ ನೋಟಿಸ್ ನೀಡಲಾಗಿತ್ತು. ಜೊತೆಗೆ ಕಟ್ಟಡ ತೆರವಿಗೆ ಕಾಲಾವಕಾಶವನ್ನು ನೀಡಲಾಗಿತ್ತು. ಗುಡುವು ಮುಗಿದ ಬಳಿಕ ತಾವೇ ತೆರವುಗೊಳಿಸುವುದಾಗಿ ಎಚ್ಚರಿಕೆಯನ್ನೂ ನೀಡಲಾಗಿತ್ತು. 

ಮಧುಗಿರಿ ರಸ್ತೆಯ ಕಟ್ಟಡ ಮಾಲೀಕರು ತಮ್ಮ ಕಟ್ಟಡಗಳನ್ನು ತೆರುವುಗೊಳಿಸಬಾರದು ಎಂದು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದಾರೆ. 

ADVERTISEMENT

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವೂ ನ್ಯಾಯಾಲಯದ ಮೆಟ್ಟಿಲೇರಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಎಇಇ ರಾಜಾರೆಡ್ಡಿ ತಿಳಿಸಿದ್ದಾರೆ. 

ಲೋಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.