ಚಿಕ್ಕಬಳ್ಳಾಪುರ: ತಾಲ್ಲೂಕಿನ ಅಗಲಗುರ್ಕಿಯ ಈಶಾ ಯೋಗ ಕೇಂದ್ರಕ್ಕೆ ಶಿವರಾತ್ರಿಯ ಪ್ರಯುಕ್ತ ಅಪಾರ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡಿದ್ದರು. ಬೆಳಿಗ್ಗೆಯಿಂದ ರಾತ್ರಿ 8ರವರೆಗೂ ಬೆಂಗಳೂರಿನಿಂದ ಬಿಎಂಟಿಸಿ ಬಸ್‌ಗಳು ಯೋಗ ಕೇಂದ್ರಕ್ಕೆ ಬರುತ್ತಿದ್ದವು.
ಚಿಕ್ಕಬಳ್ಳಾಪುರದಿಂದ ಈಶಾ ಯೋಗ ಕೇಂದ್ರಕ್ಕೆ ಸಾಗುವ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಹೆಚ್ಚಿತ್ತು. ಕೊಯಮತ್ತೂರಿನ ಈಶ ಯೋಗಕೇಂದ್ರದಲ್ಲಿ ನಡೆದ ಮಹಾಶಿವರಾತ್ರಿ ಆಚರಣೆಯು ನೇರ ಪ್ರಸಾರವನ್ನು ರಾತ್ರಿ ಸೇರಿದ್ದ ಭಕ್ತರು ಕಣ್ತುಂಬಿಕೊಂಡರು.
ಬುಧವಾರ ಬೆಳಿಗ್ಗೆ ಈಶಾ ಯೋಗ ಕೇಂದ್ರದ ಸುತ್ತಮುತ್ತಲಿನ ಗ್ರಾಮಗಳ ಸ್ಥಳೀಯ ಸಮುದಾಯಗಳ ಸದಸ್ಯರು ಅಂಗಡಿಗಳನ್ನು ಸ್ಥಾಪಿಸಿ ಕಡಲೆಕಾಯಿ, ಜೋಳ ಮತ್ತು ಎಳೆನೀರು ಸೇರಿದಂತೆ ಸ್ಥಳೀಯವಾಗಿ ಬೆಳೆದ ಉತ್ಪನ್ನಗಳನ್ನು ಮಾರಾಟ ಮಾಡಿದರು. ಗೋಶಾಲೆಯಲ್ಲಿ ದೇಸಿ ತಳಿಯ ಜಾನುವಾರುಗಳನ್ನು ಪ್ರದರ್ಶಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.