
ಪ್ರಜಾವಾಣಿ ವಾರ್ತೆ
ಸಾವು
(ಪ್ರಾತಿನಿಧಿಕ ಚಿತ್ರ)
ಬಾಗೇಪಲ್ಲಿ: ತಾಲ್ಲೂಕಿನ ಗೂಳೂರು ಹೋಬಳಿಯ ಮಾರ್ಗಾನುಕುಂಟೆ ಗ್ರಾಮದಲ್ಲಿ ವ್ಯಕ್ತಿಯೊಬ್ಬರ ಶವ ಮಂಗಳವಾರ ಪತ್ತೆಯಾಗಿದೆ.
ಈ ಸಂಬಂಧ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟ್ರ್ಯಾಕ್ಟರ್ ಚಾಲಕ ನಾರಾಯಣಸ್ವಾಮಿ (55) ಮೃತ ವ್ಯಕ್ತಿ. ಇವರು ಪಾತಪಾಳ್ಯ ಹೋಬಳಿಯ ಸಂಗಟಪಲ್ಲಿ ಗ್ರಾಮದವರು. ಇವರು 15 ವರ್ಷಗಳ ಹಿಂದೆ ಮಾರ್ಗಾನುಕುಂಟೆ ಗ್ರಾಮಕ್ಕೆ ಬಂದು ನೆಲೆಸಿದ್ದಾರೆ. 3 ದಿನಗಳ ಹಿಂದೆ ಕೆರೆಯಲ್ಲಿ ಬಿದ್ದು, ಮೃತಪಟ್ಟಿರ ಬಹುದು ಎಂದು ಶಂಕಿಸಲಾಗಿದೆ.
ಘಟನಾ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ, ಕೆರೆಯಲ್ಲಿ ಪತ್ತೆಯಾದ ಮೃತದೇಹವನ್ನು ಹೊರತೆಗೆದರು. ಬಾಗೇಪಲ್ಲಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮಾಡಲಾಯಿತು.
ಘಟನಾ ಸ್ಥಳಕ್ಕೆ ಪೊಲೀಸ್ ಸರ್ಕಲ್ ಇನ್‌ಸ್ಪೆಕ್ಟರ್ ಪ್ರಶಾಂತ್ ಆರ್. ವರ್ಣಿ ಭೇಟಿ ಮಾಡಿ ಪರಿಶೀಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.