ADVERTISEMENT

ಚಿಕ್ಕಬಳ್ಳಾಪುರ: ಗಣಿತ ಅಭ್ಯಾಸ ಪುಸ್ತಕ ವಿತರಣೆ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2022, 5:39 IST
Last Updated 25 ಸೆಪ್ಟೆಂಬರ್ 2022, 5:39 IST
ಚಿಕ್ಕಬಳ್ಳಾಪುರ ತಾಲ್ಲೂಕಿನ ರೆಡ್ಡಿಗೊಲ್ಲವಾರಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುನಾದಿ ಹಂತದ ಭಾಷೆ ಮತ್ತು ಗಣಿತ ಅಭ್ಯಾಸಗಳ ಪುಸ್ತಕ ವಿತರಣೆ ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಉದ್ಘಾಟಿಸಿದರು
ಚಿಕ್ಕಬಳ್ಳಾಪುರ ತಾಲ್ಲೂಕಿನ ರೆಡ್ಡಿಗೊಲ್ಲವಾರಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುನಾದಿ ಹಂತದ ಭಾಷೆ ಮತ್ತು ಗಣಿತ ಅಭ್ಯಾಸಗಳ ಪುಸ್ತಕ ವಿತರಣೆ ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಉದ್ಘಾಟಿಸಿದರು   

ಚಿಕ್ಕಬಳ್ಳಾಪುರ: ತಾಲ್ಲೂಕಿನ ರೆಡ್ಡಿಗೊಲ್ಲವಾರಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರಬುನಾದಿ ಹಂತದ ಭಾಷೆ ಮತ್ತು ಗಣಿತ ಅಭ್ಯಾಸಗಳ ಪುಸ್ತಕ ವಿತರಣೆ ಕಾರ್ಯಕ್ರಮ ನಡೆಯಿತು. ಶಿಕ್ಷಣ ಫೌಂಡೇಶನ್‌ ಮತ್ತು ಶಿಕ್ಷಣ ಇಲಾಖೆ ಆಶ್ರಮದಲ್ಲಿ ಕಾರ್ಯಕ್ರಮ ನಡೆಯಿತು.

ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಶಿಕ್ಷಣ ಫೌಂಡೇಶನ್‌ನಿಂದ ಬುನಾದಿ ಹಂತದ ಕನ್ನಡ, ಇಂಗ್ಲಿಷ್ ಮತ್ತು ಗಣಿತ ಅಭ್ಯಾಸ ಪುಸ್ತಕಗಳು ಮಕ್ಕಳ ಕಲಿಕೆಗೆ ಸಹಕಾರಿ ಆಗಿದೆ ಎಂದು ಹೇಳಿದರು.

ಶಿಕ್ಷಣ ಫೌಂಡೇಶನ್ ಸಂಸ್ಥೆ ನಿರ್ದೇಶಕ ನವೀನ್ ಚಿಕ್ಕ‌ಣ್ಣ ಮಾತನಾಡಿ, ಚಿಕ್ಕಬಳ್ಳಾಪುರ ತಾಲ್ಲೂಕಿನ 50 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಈ ಕಾರ್ಯಕ್ರಮ ಅನುಷ್ಠಾನಗೊಳಿಸಿದ್ದೇವೆ. ಮೂರು ಮಾರ್ಗದರ್ಶಕರು ಹಾಗೂ ತಾಲ್ಲೂಕಿನ ಸಂಯೋಜಕರು ಇದರಿಂದ ಪಾಲನೆ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ADVERTISEMENT

ಕ್ಷೇತ್ರ ಸಮನ್ವಯಾಧಿಕಾರಿ ಅರುಣ್ ಕುಮಾರ್, ಸರ್ಕಾರಿ ನೌಕರರ ಸಂಘದ ಜಂಟಿ ಪ್ರಧಾನ ಕಾರ್ಯದರ್ಶಿ ಸುನೀಲ್, ದಾನಿಗಳಾದ ಬಿ.ಆರ್. ರಘುನಾಥ ರೆಡ್ಡಿ, ರಾಜೀವ್ ಗಾಂಧಿ ಆಸ್ಪತ್ರೆ ನಿರ್ದೇಶಕ ಚಂದ್ರಶೇಖರ್ ರೆಡ್ಡಿ, ಆಂಜನೇಯ ರೆಡ್ಡಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.