ADVERTISEMENT

ಎಸ್ಸೆಸ್ಸೆಲ್ಸಿ ಗಣಿತ ಪರೀಕ್ಷೆ: 97 ವಿದ್ಯಾರ್ಥಿಗಳು ಗೈರು

ಕೋವಿಡ್ ಆತಂಕದ ನಡುವೆ ಸುಸೂತ್ರವಾದ ನಡೆದ ಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 27 ಜೂನ್ 2020, 12:31 IST
Last Updated 27 ಜೂನ್ 2020, 12:31 IST
ಗಣಿತ ಪರೀಕ್ಷೆ ಬರೆಯಲು ಬಸ್‌ ಮೂಲಕ ಕೇಂದ್ರಕ್ಕೆ ತೆರಳಿದ ವಿದ್ಯಾರ್ಥಿಗಳು
ಗಣಿತ ಪರೀಕ್ಷೆ ಬರೆಯಲು ಬಸ್‌ ಮೂಲಕ ಕೇಂದ್ರಕ್ಕೆ ತೆರಳಿದ ವಿದ್ಯಾರ್ಥಿಗಳು   

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಶನಿವಾರ ಎಸ್ಸೆಸ್ಸೆಲ್ಸಿಯ ಗಣಿತ ಪರೀಕ್ಷೆ ಸುಸೂತ್ರವಾಗಿ ನಡೆಯಿತು. ಶೇ 94.43 ರಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆದರು.

ಗಣಿತ ಪರೀಕ್ಷೆಗೆ ಜಿಲ್ಲೆಯಲ್ಲಿ 16,893 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದರು. ಈ ಪೈಕಿ ಜಿಲ್ಲೆಯ 64 ಪರೀಕ್ಷಾ ಕೇಂದ್ರಗಳಲ್ಲಿ 16,796 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾದರೆ, 97 ವಿದ್ಯಾರ್ಥಿಗಳು ಗೈರಾದರು. ಪರೀಕ್ಷೆ ಬೆಳಿಗ್ಗೆ 10.30 ರಿಂದ 1.45ರ ವರೆಗೆ ನಡೆಯಿತು.

ಕೋವಿಡ್‌ ಭಯದ ಕಾರಣಕ್ಕೆ ಪ್ರತಿ ಕೇಂದ್ರದಲ್ಲೂ ವಿದ್ಯಾರ್ಥಿಗಳು ಕೇಂದ್ರ ಪ್ರವೇಶಕ್ಕೂ ಮುನ್ನ ಆರೋಗ್ಯ ತಪಾಸಣೆ ನಡೆಸಲಾಯಿತು. ಕೋವಿಡ್ ಪೀಡಿತ ಪ್ರದೇಶದಿಂದ ಬಂದಿದ್ದ 12 ಮತ್ತು ಅನಾರೋಗ್ಯದಿಂದ ಬಳಲುತ್ತಿದ್ದ ಎಂಟು ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಗಳಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿತ್ತು.

ADVERTISEMENT

ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬರಲು ಅನುಕೂಲವಾಗುವಂತೆ ಬಸ್‌ಗಳ ವ್ಯವಸ್ಥೆ ಮಾಡಲಾಗಿತ್ತು. ಗಣಿತ ಪರೀಕ್ಷೆಯಲ್ಲಿ ಜಿಲ್ಲೆಯಲ್ಲಿ ಪರೀಕ್ಷಾ ಅಕ್ರಮ ನಡೆಸಿ ಡಿಬಾರ್ ಆದ ಪ್ರಕರಣಗಳಾಗಲಿ, ಅಹಿತಕರ ಘಟನೆಗಳು ನಡೆದ ವರದಿಯಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.