ADVERTISEMENT

ನಮ್ಮೂರ ಭೂಮಿ ನಮಗಿರಲಿ, ಅನ್ಯರಿಗಲ್ಲ ಆಂದೋಲನಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2020, 3:23 IST
Last Updated 11 ಸೆಪ್ಟೆಂಬರ್ 2020, 3:23 IST
ಕರ್ನಾಟಕ ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿ ಆಂದೋಲನದ ಅಂಗವಾಗಿ ತಾಲ್ಲೂಕಿನ ಆನೂರು ಗ್ರಾಮ ಪಂಚಾಯಿತಿ ಕಾರ್ಯಾಲಯದ ಮುಂಭಾಗ ಬ್ಯಾನರ್ ಕಟ್ಟುವ ಮೂಲಕ ಜನರಿಗೆ ಮಾಹಿತಿ ನೀಡುವ ವಿಶೇಷ ಆಂದೋಲನಕ್ಕೆ ರೈತ ಮುಖಂಡರು ಚಾಲನೆ ನೀಡಿದರು
ಕರ್ನಾಟಕ ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿ ಆಂದೋಲನದ ಅಂಗವಾಗಿ ತಾಲ್ಲೂಕಿನ ಆನೂರು ಗ್ರಾಮ ಪಂಚಾಯಿತಿ ಕಾರ್ಯಾಲಯದ ಮುಂಭಾಗ ಬ್ಯಾನರ್ ಕಟ್ಟುವ ಮೂಲಕ ಜನರಿಗೆ ಮಾಹಿತಿ ನೀಡುವ ವಿಶೇಷ ಆಂದೋಲನಕ್ಕೆ ರೈತ ಮುಖಂಡರು ಚಾಲನೆ ನೀಡಿದರು   

ಶಿಡ್ಲಘಟ್ಟ: ಕರ್ನಾಟಕ ಭೂಸುಧಾರಣಾ ಕಾಯ್ದೆ ತಿದ್ದುಪಡಿ ಮಾಡಿರುವುದನ್ನು ವಿರೋಧಿಸಿ ‘ನಮ್ಮೂರ ಭೂಮಿ ನಮಗಿರಲಿ, ಅನ್ಯರಿಗಲ್ಲ’ ಎಂಬ ಘೋಷಣೆಯಡಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲ್ಲೂಕು ಘಟಕದ ಪದಾಧಿಕಾರಿಗಳು ಜನರಿಗೆ ಮಾಹಿತಿ ನೀಡುವ ಆಂದೋಲನಕ್ಕೆ ಆನೂರಿನಲ್ಲಿ ಬುಧವಾರ ಚಾಲನೆ ನೀಡಿದರು.

ರೈತ ಮುಖಂಡ ಬೆಳ್ಳೂಟಿ ಮುನಿಕೆಂಪಣ್ಣ, ರೈತ ಮುಖಂಡ ಭಕ್ತರಹಳ್ಳಿ ಪ್ರತೀಶ್ ಮಾತನಾಡಿದರು.

ಆನೂರು ಗ್ರಾಮ ಪಂಚಾಯಿತಿ ಪಿಡಿಒ ಕಾತ್ಯಾಯಿನಿ, ರೈತ ಮುಖಂಡ ರಾದ ಸುರೇಶ್, ಶ್ರೀರಾಮಪ್ಪ, ಅಭಿ ಲಾಷ್‌, ಶಿವು, ದೇವರಾಜ್, ಶ್ರೀನಿವಾಸ್, ಬಿ.ಸಿ.ರಮೇಶ್, ಮುನಿಯಪ್ಪ, ನಾರಾಯಣಸ್ವಾಮಿ ಹಾಜರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.