ADVERTISEMENT

ಚಿಕ್ಕಬಳ್ಳಾಪುರ: ವ್ಯಕ್ತಿಗೆ ಕೊರೊನಾ ಸೋಂಕು ಶಂಕೆ, ಸೂಕ್ತ ತಪಾಸಣೆ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2020, 9:36 IST
Last Updated 21 ಮಾರ್ಚ್ 2020, 9:36 IST
ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮಾತನಾಡಿದರು.
ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮಾತನಾಡಿದರು.   

ಚಿಕ್ಕಬಳ್ಳಾಪುರ: ಗೌರಿಬಿದನೂರು ವ್ಯಕ್ತಿಗೆ ಕೋವಿಡ್ -19 ತಗಲಿರುವುದು ಸಂಜೆ ವೇಳೆಗೆ ದೃಢಪಡಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಜಿಲ್ಲಾ ಪಂಚಾಯಿತಿಯಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಈ‌ ವಿಚಾರ ತಿಳಿಸಿದರು.

ಶಂಕಿತ ವ್ಯಕ್ತಿಯ ‌ಕುಟುಂಬದಲ್ಲಿ ನಾಲ್ಕು ಜನ ಸದಸ್ಯರಿದ್ದಾರೆ. ಅವರು ಸೇರಿದಂತೆ ಶಂಕಿತನ ಪ್ರಾಥಮಿಕ ಮತ್ತು ಎರಡನೇ ಹಂತದ ಸಂಪರ್ಕಕ್ಕೆ ಬಂದವರ ಮಾಹಿತಿ ಕಲೆ ಹಾಕಿ ತಪಾಸಣೆ ನಡೆಸುವ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.