ADVERTISEMENT

ಮೆಗಾ ಡೇರಿ: ಯಾರಿಗೂ ಸೋಂಕಿಲ್ಲ

​ಪ್ರಜಾವಾಣಿ ವಾರ್ತೆ
Published 12 ಜುಲೈ 2020, 11:42 IST
Last Updated 12 ಜುಲೈ 2020, 11:42 IST

ಚಿಕ್ಕಬಳ್ಳಾಪುರ: ತಾಲ್ಲೂಕಿನ ನಂದಿ ಕ್ರಾಸ್‌ ಬಳಿ ಇರುವ ಕೋಲಾರ–ಚಿಕ್ಕಬಳ್ಳಾಪುರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ (ಕೋಚಿಮುಲ್‌) ಮೆಗಾ ಡೇರಿಯ ಯಾವುದೇ ಅಧಿಕಾರಿ, ಸಿಬ್ಬಂದಿಗೆ ಕೋವಿಡ್‌ 19 ತಗುಲಿಲ್ಲ ಎಂದು ಕೋಚಿಮುಲ್ ನಿರ್ದೇಶಕ ಎನ್‌.ಸಿ.ವೆಂಕಟೇಶ್‌ ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ವೆಂಕಟೇಶ್‌ ಅವರು, ‘ಇತ್ತೀಚೆಗೆ ಕೆಲ ಮಾಧ್ಯಮಗಳಲ್ಲಿ ಮೆಗಾ ಡೇರಿಯ ಒಬ್ಬ ಅಧಿಕಾರಿಗೆ ಕೋವಿಡ್‌ ಸೋಂಕು ತಗುಲಿದೆ ಎಂದ ವರದಿ ಪ್ರಕಟವಾಗಿವೆ. ಇದು ಸುಳ್ಳು. ಸಾರ್ವಜನಿಕರು ಸುಳ್ಳು ವದಂತಿಗೆ ಕಿವಿಗೊಡಬಾರದು’ ಎಂದು ಹೇಳಿದ್ದಾರೆ.

‘ಮೆಗಾ ಡೇರಿಯ ಎಂಜಿನಿಯರಿಂಗ್‌ ವಿಭಾಗದ ಸಹಾಯಕ ವ್ಯವಸ್ಥಾಪಕರೊಬ್ಬರ ಸಹೋದರನಿಗೆ ಕೋವಿಡ್‌ ಇರುವುದು ಪತ್ತೆಯಾಗಿದೆ. ಅವರು ಊರಿನಲ್ಲಿರುವ ಮನೆಯಲ್ಲಿಯೇ ಸ್ವಯಂ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ಅವರಿಗೂ ಮೆಗಾ ಡೇರಿಗೂ ಯಾವುದೇ ಸಂಬಂಧವಿಲ್ಲ’ ಎಂದಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.