ADVERTISEMENT

ಮಕ್ಕಳ ಜತೆ ಬಿಸಿಯೂಟ ಸವಿದ ತಹಶೀಲ್ದಾರ್

​ಪ್ರಜಾವಾಣಿ ವಾರ್ತೆ
Published 15 ನವೆಂಬರ್ 2025, 7:22 IST
Last Updated 15 ನವೆಂಬರ್ 2025, 7:22 IST
ಶಿಡ್ಲಘಟ್ಟ ತಾಲ್ಲೂಕಿನ ವರದನಾಯಕನಹಳ್ಳಿ ಸರ್ಕಾರಿ ಶಾಲೆಯಲ್ಲಿ ತಹಶೀಲ್ದಾರ್ ಗಗನ ಸಿಂಧು ಅವರು ಮಕ್ಕಳೊಂದಿಗೆ ಬಿಸಿಯೂಟ ಸೇವಿಸಿದರು
ಶಿಡ್ಲಘಟ್ಟ ತಾಲ್ಲೂಕಿನ ವರದನಾಯಕನಹಳ್ಳಿ ಸರ್ಕಾರಿ ಶಾಲೆಯಲ್ಲಿ ತಹಶೀಲ್ದಾರ್ ಗಗನ ಸಿಂಧು ಅವರು ಮಕ್ಕಳೊಂದಿಗೆ ಬಿಸಿಯೂಟ ಸೇವಿಸಿದರು   

ಶಿಡ್ಲಘಟ್ಟ: ತಾಲ್ಲೂಕಿನ ವರದನಾಯಕನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಮಕ್ಕಳ ದಿನ ಮತ್ತು ಪೋಷಕರು ಹಾಗೂ ಶಿಕ್ಷಕರ ಮಹಾಸಭೆ ನಡೆಯಿತು. 

ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ತಹಶೀಲ್ದಾರ್ ಗಗನ ಸಿಂಧು, ‘ಶಾಲೆಯಲ್ಲಿ ಶಿಕ್ಷಕರು ಕಲಿಸಿದ ಪಾಠವನ್ನು ಮಕ್ಕಳು ಮನೆಗೆ ಹೋಗಿ, ಮತ್ತೊಮ್ಮೆ ಓದಬೇಕು. ನೀವು ಕಲಿತ ಸಂಗತಿಗಳನ್ನು ಪೋಷಕರು ಮತ್ತು ಸಹಪಾಠಿಗಳ ಜೊತೆ ಹಂಚಿಕೊಳ್ಳಬೇಕು. ಸರ್ಕಾರಿ ಶಾಲೆಗಳಲ್ಲಿ ಓದಿದವರೇ ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಸರ್ಕಾರಿ ಶಾಲೆಯಲ್ಲಿ ಕಲಿತ ಮಕ್ಕಳು ಕೀರ್ತಿವಂತರಾಗಿ ಬೆಳೆಯಬೇಕು’ ಎಂದು ಹೇಳಿದರು. 

ಶಾಲಾ ಮಕ್ಕಳೊಂದಿಗೆ ಕುಳಿತು ಊಟ ಮಾಡಿ ಮಕ್ಕಳಿಗೆ ಶಿಕ್ಷಣ ಮಹತ್ವದ ಬಗ್ಗೆ ತಿಳಿಸಿದರು. ಪೋಷಕರಿಗೂ ಮಕ್ಕಳ ಶಿಕ್ಷಣ ಹಾಗೂ ಅವರು ಕಲಿಯುತ್ತಿರುವ ಶಾಲೆಯ ಬಗ್ಗೆ ಕಾಳಜಿ ವಹಿಸುವಂತೆ ಕೋರಿದರು.

ADVERTISEMENT

ಈ ವೇಳೆ ಕಸಬಾ ಹೋಬಳಿ ಆರ್.ಐ ವೇಣುಗೋಪಾಲ್, ವಿ.ಎ. ನಾಗರಾಜ್, ಶಾಲಾ ಮುಖ್ಯ ಶಿಕ್ಷಕಿ ಶಾಮಲ, ಲಕ್ಷ್ಮಿದೇವಿ, ಅಂಜಲಿ, ಶ್ರೀನಾಥ, ಕರ್ನಾಟಕ ಸಾಹಿತ್ಯ ಅಕಾಡೆಮಿಯ ಚಕೋರ ಸಾಹಿತ್ಯ ವಿಚಾರ ವೇದಿಕೆ ಜಿಲ್ಲಾ ಸಂಚಾಲಕ ಈ ಧರೆ ಪ್ರಕಾಶ್, ಎಸ್‌ಡಿಎಂಸಿ ಅಧ್ಯಕ್ಷ ಗಂಗಾಧರ್, ಕವಿತಾ, ನಾಗರಾಜ್, ಮಹೇಶ್, ಮೂರ್ತಿ, ಅಕ್ಕಯಮ್ಮ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.