ಚಿಕ್ಕಬಳ್ಳಾಪುರ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮತ್ತು ಕಾಯಂಗೊಳಿಸುವಂತೆ ಒತ್ತಾಯಿಸಿ ಬಿಸಿಯೂಟ ನೌಕರರು ದೇಶದಾದ್ಯಂತ ಜು.9ರಂದು ಮುಷ್ಕರಕ್ಕೆ ಕರೆ ನೀಡಿದ್ದಾರೆ.
ಈ ಪ್ರಯುಕ್ತ ನಗರದ ಸಿಪಿಎಂ ಕಚೇರಿಯಲ್ಲಿ ಬಿಸಿಯೂಟ ನೌಕರರ ಸಭೆ ಶನಿವಾರ ನಡೆಯಿತು.
ಬದುಕನ್ನು ಉಳಿಸುವ ಸಂಘದ ಮುಷ್ಕರದ ಹಕ್ಕು ಕಸಿಯುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವಂತೆ ಮತ್ತು ಬಿಸಿಯೂಟ ನೌಕರರನ್ನು ಕಾಯಂ ಮಾಡುವಂತೆ ಒತ್ತಾಯಿಸಿ ಮುಷ್ಕರ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಎಲ್ಲ ಬಿಸಿಯೂಟ ಸಿಬ್ಬಂದಿ ಈ ಮುಷ್ಕರಲ್ಲಿ ಪಾಲ್ಗೊಳ್ಳಬೇಕು ಎಂದು ಮುಖಂಡರು ಕೋರಿದರು.
ಬಿಸಿಯೂಟದ ಮೂಲಕ ಮಕ್ಕಳ ಅಪೌಷ್ಟಿಕತೆ ನಿವಾರಣೆಗೆ ನೌಕರರು ಶ್ರಮಿಸುತ್ತಿದ್ದಾರೆ. ಬಿಸಿಯೂಟ ನೌಕರರನ್ನು ಕಾರ್ಮಿಕರು ಎಂದು ಪರಿಗಣಿಸಿ ಪಿಂಚಣಿ ಸೇರಿದಂತೆ ಶಾಸನ ಬದ್ಧ ಸೌಲಭ್ಯಗಳನ್ನು ನೀಡಬೇಕು ಎಂದು ಆಗ್ರಹಿಸಿದರು.
ಸಂಘದ ಗೌರವಾಧ್ಯಕ್ಷ ಬಿ.ಎನ್.ಮುನಿಕೃಷ್ಣಪ್ಪ, ಪ್ರಧಾನ ಕಾರ್ಯದರ್ಶಿ ಕೆ.ಆರ್.ಮಂಜುಳಾ, ಖಜಾಂಚಿ ಭಾರತಿ, ಕಾಂತ, ಚನ್ನಮ್ಮ, ಅರುಣಾ, ವನಜಾಕ್ಷಿ, ಉಮಾ, ಆಶಾ, ನಾಮಗಣಿ, ಅಶ್ವತ್ಥಮ್ಮ, ಶಶಿಕಲಾ ಮತ್ತಿತರರು ಸಭೆಯಲ್ಲಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.