ADVERTISEMENT

ಗುಣಮಟ್ಟದ ಹಾಲು ಪ್ರಗತಿಗೆ ಸಹಕಾರಿ

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2020, 4:26 IST
Last Updated 10 ನವೆಂಬರ್ 2020, 4:26 IST
ಚಿಂತಾಮಣಿ ತಾಲ್ಲೂಕಿನ ಕೈವಾರದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ ನಡೆಯಿತು
ಚಿಂತಾಮಣಿ ತಾಲ್ಲೂಕಿನ ಕೈವಾರದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ ನಡೆಯಿತು   

ಚಿಂತಾಮಣಿ: ‘‌ಉತ್ಪಾದಕರು ಗುಣಮಟ್ಟದ ಹಾಲು ಪೂರೈಸಿದರೆ ಮಾತ್ರ ಹಾಲು ಉತ್ಪಾದಕರ ಸಹಕಾರ ಸಂಘ ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಸಾಧ್ಯ’ ಎಂದು ಕೈವಾರ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಶಿವಾನಂದ ಸಲಹೆ ನೀಡಿದರು.

ತಾಲ್ಲೂಕಿನ ಕೈವಾರ ಹಾಲು ಉತ್ಪಾದಕರ ಸಹಕಾರ ಸಂಘದ ಆವರಣದಲ್ಲಿ ನಡೆದ 2019-20ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

ಕೋಚಿಮುಲ್ ಶಿಬಿರದ ಪ್ರಯೋಗಾಲಯದ ಮುಖ್ಯಸ್ಥ ಡಾ.ಎಲ್. ರಾಘವೇಂದ್ರ ಮಾತನಾಡಿದರು. ಶಿಬಿರದ ಉಪ ವ್ಯವಸ್ಥಾಪಕ ಎ.ವಿ. ಶಂಕರರೆಡ್ಡಿ, ವಿಸ್ತರಣಾಧಿಕಾರಿ ಎಂ.ಎಸ್. ನಾರಾಯಣಸ್ವಾಮಿ, ಮಾಜಿ ಕಾರ್ಯದರ್ಶಿ ಎ. ಕೃಷ್ಣಪ್ಪ, ಸಂಘದ ಉಪಾಧ್ಯಕ್ಷ ಬಿ.ಎನ್. ನಾರಾಯಣಸ್ವಾಮಿ, ನಿರ್ದೇಶಕರಾದ ಬಿ.ಎಂ. ರಾಜಣ್ಣ, ಜಿ. ನಾಗರಾಜ್, ಎಂ. ನರಸಿಂಹಮೂರ್ತಿ, ಸೊಣ್ಣಮ್ಮ, ಮುನಿರತ್ನಮ್ಮ, ನಾರಾಯಣಪ್ಪ, ಕೈವಾರ, ಬನಹಳ್ಳಿ, ಗುಡಿಸಲಹಳ್ಳಿಯ ಉತ್ಪಾದಕರು ಹಾಜರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.