ADVERTISEMENT

ಚಿಕ್ಕಬಳ್ಳಾಪುರ: 29ರಂದು ಮಿನಿ ಉದ್ಯೋಗ ಮೇಳ

​ಪ್ರಜಾವಾಣಿ ವಾರ್ತೆ
Published 27 ಆಗಸ್ಟ್ 2021, 3:08 IST
Last Updated 27 ಆಗಸ್ಟ್ 2021, 3:08 IST

ಚಿಕ್ಕಬಳ್ಳಾಪುರ: ಜಿಲ್ಲಾಡಳಿತ, ಜಿಲ್ಲಾ ಕೌಶಲಾಭಿವೃದ್ಧಿ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಇಲಾಖೆ ಮತ್ತು ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಆಶ್ರಯದಲ್ಲಿ ಆ. 29ರಂದು ಬೆಳಿಗ್ಗೆ 9ಕ್ಕೆ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಆವರಣದಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಉದ್ಯೋಗಾಕಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ‍ಪ್ರಯೋಜನ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಕೌಶಲಾಭಿವೃದ್ಧಿ ಅಧಿಕಾರಿತಿಳಿಸಿದ್ದಾರೆ.

ಮೇಳದಲ್ಲಿ ಎಸ್ಸೆಸ್ಸೆಲ್ಸಿ ಉತ್ತೀರ್ಣ ಅಥವಾ ಅನುತ್ತೀರ್ಣ, ಪಿಯುಸಿ, ಪದವಿ, ಐಟಿಐ, ಡಿಪ್ಲೊಮ, ಎಂಜಿನಿಯರಿಂಗ್, ಸ್ನಾತಕೋತ್ತರ ಪದವಿ ಉತ್ತೀರ್ಣರಾದ ವಿದ್ಯಾರ್ಥಿಗಳು ಹಾಗೂ 18 ರಿಂದ 35 ವರ್ಷ ಒಳಗಿರುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಭಾಗವಹಿಸಬಹುದು. ಮೇಳಕ್ಕೆ ಹಾಜರಾಗುವ ಅಭ್ಯರ್ಥಿಗಳು 5 ಪ್ರತಿ ಬಯೋಡೇಟ, ಅಂಕಪಟ್ಟಿ, ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ ದಾಖಲೆಗಳನ್ನು ಕಡ್ಡಾಯವಾಗಿ ತರಬೇಕು.

ಮೇಳದಲ್ಲಿ 15 ರಿಂದ 20 ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿವೆ. 900 ಉದ್ಯೋಗಗಳುಲಭ್ಯವಿವೆ. ಮಾಹಿತಿಗಾಗಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಕೌಶಲಾಭಿವೃದ್ಧಿ ಇಲಾಖೆ ಕಚೇರಿ ಮತ್ತು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಸಂಪರ್ಕಿಸಬಹುದು.

ADVERTISEMENT

ಮೇಳದ ಬಗ್ಗೆ ಹೆಚ್ಚಿನ ಮಾಹಿತಿ ಮೊಬೈಲ್ 88617 34824, 80505 20745, 63615 13149ಕ್ಕೆ ಕರೆ ಮಾಡಬಹುದು. ಆಸಕ್ತರುhttps://forms.gle/me5xppPwRHKMi4M4A ಲಿಂಕ್ ಮೂಲಕ ನೋಂದಣಿ ಮಾಡಿಕೊಳ್ಳಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.