ಚಿಕ್ಕಬಳ್ಳಾಪುರ: ಮಾನಹಾನಿಕರ ವರದಿ ಪ್ರಕಟಿಸಬಾರದು ಎಂದು ಮತ್ತಷ್ಟು ಸಚಿವರು ಇಂಜಕ್ಷನ್ ಕೋರಿ ನ್ಯಾಯಾಲಯದ ಮೊರ ಹೋಗುವರು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ನಾವು ಬಿಜೆಪಿಯ ಪ್ರಮುಖರ ಗಮನಕ್ಕೆ ತಂದೆಯೇ ನ್ಯಾಯಾಲಯಕ್ಕೆ ಹೋಗಿದ್ದೇವೆ’ ಎಂದರು.
ಸಚಿವರು ನ್ಯಾಯಾಲಯದ ಮೊರೆ ಹೋಗಿರುವುದು ಪಕ್ಷಕ್ಕೆ ಮುಜುಗರ ತರುವ ವಿಷಯ ಎಂದಿರುವ ಕೇಂದ್ರ ಸಚಿವ ಸದಾನಂದಗೌಡ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರಿಗೆ ಮಾಹಿತಿಯ ಕೊರತೆ ಇದೆ ಎಂದು ಹೇಳಿದರು.
ಇವನ್ನೂ ಓದಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.