ಅಶ್ವಥ್ ಕುಮಾರ್
ಗೌರಿಬಿದನೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಅವರ ಪತ್ನಿ ಅನಿತಾ ಅವರ ತಂದೆ ಅಶ್ವತ್ಥ್ ಕುಮಾರ್ (90) ಬುಧವಾರ ನಿಧನರಾದರು.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ಟಿ.ದಾಸರಹಳ್ಳಿಯಲ್ಲಿ ಪುತ್ರಿ ಅನಿತಾ ಅವರ ನಿವಾಸದಲ್ಲಿ ಇದ್ದರು. ಅವರಿಗೆ ಪತ್ನಿ ಮತ್ತು ಇಬ್ಬರು ಪುತ್ರರು, ನಾಲ್ವರು ಪುತ್ರಿಯರಿದ್ದಾರೆ. ಸಿವಿಲ್ ಎಂಜಿನಿಯರ್ ಆಗಿದ್ದ ಅವರು, ಗೌರಿಬಿದನೂರು ವಿ.ವಿ.ಪುರಂನಲ್ಲಿ ವಾಸವಾಗಿದ್ದರು.
ಟಿ.ದಾಸರಹಳ್ಳಿಯಲ್ಲಿ ಗುರುವಾರ ಅಂತ್ಯ ಸಂಸ್ಕಾರ ನಡೆಯಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮಧು ಬಂಗಾರಪ್ಪ, ನಟ ಶಿವರಾಜ್ ಕುಮಾರ್ ಕುಟುಂಬ ಸೇರಿದಂತೆ ಗಣ್ಯರು ಅಂತಿಮ ದರ್ಶನ ಪಡೆದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.