ADVERTISEMENT

ಪೊಲೀಸರಿಗೆ ವಾಹನ ಒದಗಿಸಿದ ಶಾಸಕ ಎಂ.ಕೃಷ್ಣಾರೆಡ್ಡಿ

​ಪ್ರಜಾವಾಣಿ ವಾರ್ತೆ
Published 28 ಜನವರಿ 2021, 2:48 IST
Last Updated 28 ಜನವರಿ 2021, 2:48 IST
ಚಿಂತಾಮಣಿಯಲ್ಲಿ ಶಾಸಕರ ಅನುದಾನದಲ್ಲಿ ಎರಡು ಬೊಲೆರೊ ವಾಹನಗಳನ್ನು ಶಾಸಕ ಎಂ.ಕೃಷ್ಣಾರೆಡ್ಡಿ ಪೊಲೀಸ್ ಇಲಾಖೆಗೆ ಹಸ್ತಾಂತರಿಸಿದರು
ಚಿಂತಾಮಣಿಯಲ್ಲಿ ಶಾಸಕರ ಅನುದಾನದಲ್ಲಿ ಎರಡು ಬೊಲೆರೊ ವಾಹನಗಳನ್ನು ಶಾಸಕ ಎಂ.ಕೃಷ್ಣಾರೆಡ್ಡಿ ಪೊಲೀಸ್ ಇಲಾಖೆಗೆ ಹಸ್ತಾಂತರಿಸಿದರು   

ಚಿಂತಾಮಣಿ: ಕಾನೂನು ಸುವ್ಯವಸ್ಥೆಯ ಪಾಲನೆಗಾಗಿ ಹಾಗೂ ಅಪಘಾತ, ಅಪರಾಧ ಚಟುವಟಿಕೆಗಳನ್ನು ತಡೆಗಟ್ಟಲು ಪೊಲೀಸ್ ಇಲಾಖೆಗೆ ವಾಹನಗಳ ಅಗತ್ಯ ಹೆಚ್ಚಾಗಿರುತ್ತದೆ ಎಂದು ಶಾಸಕ ಎಂ.ಕೃಷ್ಣಾರೆಡ್ಡಿ ಅಭಿಪ್ರಾಯಪಟ್ಟರು.

ನಗರದ ಪೊಲೀಸ್ ಠಾಣೆ ಆವರಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಶಾಸಕರ ಅನುದಾನದಲ್ಲಿ ₹16 ಲಕ್ಷ ಬೆಲೆಯ ಎರಡು ಬೊಲೆರೊ ವಾಹನಗಳನ್ನು ಹಸ್ತಾಂತರಿಸಿ ಮಾತನಾಡಿದರು.

‘ಅಧಿಕಾರಿಗಳು ತಾವು ಕೆಲಸ ಮಾಡಿದ ಕಡೆ ವರ್ಗಾವಣೆಯಾಗಿ ಹೋದ ನಂತರವೂ ಜನರು ನೆನಪಿಸಿಕೊಳ್ಳುವಂತಹ ಶಾಶ್ವತ ಕೆಲಸಗಳನ್ನು ಮಾಡಬೇಕು. ವೈಯಕ್ತಿಕ ಆಸಕ್ತಿ ವಹಿಸಿ ಸಮಸ್ಯೆಗಳ ಪರಿಹಾರಕ್ಕಾಗಿ ಶ್ರಮವಹಿಸಬೇಕು. ಅಧಿಕಾರದಲ್ಲಿದ್ದು ಮಾಮೂಲಿನಂತೆ ಕಾಲ ಕಳೆದುಕೊಂಡು ಹೋದರೆ ಪ್ರಯೋಜನವಿಲ್ಲ’ ಎಂದರು.

ADVERTISEMENT

ಎಸ್ಪಿ ಮಿಥುನ್ ಕುಮಾರ್ ಮಾತನಾಡಿ, ‘ಪೊಲೀಸ್ ಇಲಾಖೆಗೆ ವಾಹನಗಳ ಅಗತ್ಯ ಹೆಚ್ಚಾಗಿರುತ್ತದೆ. ತುರ್ತು ಕಾರ್ಯಗಳಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿಗಳು ತೊಡಗಿರುತ್ತಾರೆ. ಸುಸಜ್ಜಿತವಾದ ವಾಹನಗಳು ಅಗತ್ಯ. ಕೊರೊನಾ ಹಿನ್ನೆಲೆಯಲ್ಲಿ ಆಟೋ ಚಾಲಕರಿಗೆ ತುಂಬಾ ತೊಂದರೆಯಾಗಿದೆ. ಹೀಗಾಗಿ 50 ಚಾಲಕರಿಗೆ ಉಚಿತ ಸಮವಸ್ತ್ರ ನೀಡಲಾಗಿದೆ. ನಗರದ ಗ್ರಾಮಾಂತರ ಪೊಲೀಸ್ ಠಾಣೆಗೆ ನೂತನ ಕಟ್ಟಡವನ್ನು ನಿರ್ಮಿಸಿಕೊಡಬೇಕು’ ಎಂದು ಕೋರಿದರು.

ಸಾರಿಗೆ ಇಲಾಖೆಯ ಅಧಿಕಾರಿ ನಾಗರಾಜ್ ಮಾತನಾಡಿ, ‘ವಾಹನ ಚಾಲಕರು ವಾಹನದ ದಾಖಲೆಗಳನ್ನು ಹೊಂದಿರಬೇಕು. ಸಂಚಾರ ನಿಯಮಗಳನ್ನು ಪಾಲಿಸಬೇಕು. ಕಾನೂನಿನ ಚೌಕಟ್ಟಿನಲ್ಲಿ ನಡೆದರೆ ಎಲ್ಲರಿಗೂ ಒಳ್ಳೆಯದಾಗುತ್ತದೆ. ನಗರದಲ್ಲಿ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಗೆ ಒಂದು ಕಟ್ಟಡವನ್ನು ನಿರ್ಮಿಸಿಕೊಡಬೇಕು’ ಎಂದು ಶಾಸಕರಲ್ಲಿ ಮನವಿ
ಮಾಡಿದರು.

ಡಿವೈಎಸ್ಪಿ ವಿ.ಲಕ್ಷ್ಮಯ್ಯ, ನಗರಠಾಣೆ ಇನ್ಸ್ ಪೆಕ್ಟರ್ ಆನಂದಕುಮಾರ್ ಮಾತನಾಡಿದರು. ಸರ್ಕಲ್ ಇನ್‌ಸ್ಪೆಕ್ಟರ್‌ ಶ್ರೀನಿವಾಸಪ್ಪ, ಪೌರಾಯುಕ್ತ ಉಮಾಶಂಕರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.