ಚೇಳೂರು: ತಾಲ್ಲೂಕಿನ ಎಂ.ನಲ್ಲಗುಟ್ಲಪಲ್ಲಿ ಗ್ರಾಮದ ಹೊರವಲಯದಲ್ಲಿರುವ ಮಹರ್ಷಿ ವಾಲ್ಮೀಕಿ ಆಶ್ರಮ ಶಾಲೆಗೆ ಶಾಸಕ ಎಸ್.ಎನ್ ಸುಬ್ಬಾರೆಡ್ಡಿ ಭೇಟಿ ನೀಡಿ ಸೌಲಭ್ಯ ಹಾಗೂ ವ್ಯವಸ್ಥೆ ಪರಿಶೀಲನೆ ನಡೆಸಿದರು.
ಬಳಿಕ ಅಲ್ಲಿನ ಸಿಬ್ಬಂದಿ ವರ್ಗದ ಜೊತೆ ಮಾತನಾಡಿ ನಿಯಮಿತವಾಗಿ ಹಾಸ್ಟೆಲ್ ಗಳಿಗೆ, ಆಶ್ರಮ ಶಾಲೆಗಳಿಗೆ ಅಧಿಕಾರಿಗಳು ಭೇಟಿ ನೀಡಬೇಕು. ನಿರಂತರವಾಗಿ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಶ್ರಮಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.ಶುಚಿ ಕಿಟ್‌ಗಳು, ಆಹಾರ ಪದಾರ್ಥ ವಿತರಣೆ ಸಮರ್ಪಕವಾಗಿ ಆಗುತ್ತಿದೆಯೇ ಎಂದು ಪರಿಶೀಲಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಕೆಲವು ಆಶ್ರಮ ಶಾಲೆಗಳಲ್ಲಿ ರಾತ್ರಿ ವೇಳೆ ಮಕ್ಕಳು ಇರುವುದಿಲ್ಲ. ಮಕ್ಕಳನ್ನು ರಾತ್ರಿ ಊಟವಾದ ನಂತರ ಮನೆಗೆ ಕರೆದುಕೊಂಡು ಹೋಗುತ್ತಾರೆ. ಎಲ್ಲ ಸೌಲಭ್ಯ ಇದ್ದೂ, ಯಾಕೆ ಮನೆಗೆ ಕರೆದುಕೊಂಡು ಹೋಗುತ್ತಾರೆ. ಈ ಕುರಿತು ಪರಾಮರ್ಶೆ ನಡೆಸಿ, ಪೋಷಕರಿಗೆ ಮನವರಿಕೆ ಮಾಡಿ ಎಂದು ಸೂಚಿಸಿದರು.
ಬಳಿಕ ಹಾಸ್ಟೆಲ್ ನ ವಸತಿ ಗೃಹಗಳ ಮೂಲ ಸೌಲಭ್ಯಗಳನ್ನು ಮತ್ತು ಶಾಲಾ ಕೊಠಡಿಗಳು ಹಾಗೂ ಮಲಗುವ ಕೋಣೆಗಳನ್ನು ವೀಕ್ಷಣೆ ಮಾಡಿ ಸಲಹೆ, ಸೂಚನೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.