ಶಿಡ್ಲಘಟ್ಟ: ತಾಲ್ಲೂಕಿನ ತಿಮ್ಮನಾಯಕನಹಳ್ಳಿ ಪಂಚಾಯಿತಿ, ನಲ್ಲೊಜನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಹನ್ನೆರಡು ಸ್ಥಾನದಲ್ಲಿ ಹತ್ತು ಸ್ಥಾನದಲ್ಲಿ ಜೆಡಿಎಸ್ ಬೆಂಬಲಿಗರು ಗೆಲುವು ಸಾಧಿಸಿದ್ದಾರೆ. ಶನಿವಾರ ನಡೆದ ಅಧ್ಯಕ್ಷ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ದ್ಯಾವಪ್ಪ ಅವರು ಸಂಘದ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಶಾಸಕ ಮೇಲೂರು ಬಿ.ಎನ್.ರವಿಕುಮಾರ್ ಅವರು ನೂತನ ಆಡಳಿತ ಮಂಡಳಿ ನಿರ್ದೇಶಕರು ಹಾಗೂ ಅಧ್ಯಕ್ಷರನ್ನು ಅಭಿನಂದಿಸಿದರು.
ನಿರ್ದೇಶಕ ಎನ್.ವಿ.ಶ್ರೀನಿವಾಸ್, ಎಂ.ಮುನಿಕೃಷ್ಣಪ್ಪ, ಮುನಿರೆಡ್ಡಿ, ನಾರಾಯಣಸ್ವಾಮಿ, ಲಕ್ಷ್ಮಣರೆಡ್ಡಿ, ಅವುಲಪ್ಪ, ಕೇಶವಪ್ಪ, ತೈಲಗೆರೆ ಮುನಿಕೃಷ್ಣಪ್ಪ, ಶೋಬಮ್ಮ, ಸುಬ್ಬಮ್ಮ, ಕಾರ್ಯದರ್ಶಿ ನಾಗರಾಜ್, ಮುಖಂಡ ಬಿ.ಶಿವಕುಮಾರ್, ವಿಜಯ ಬಾವರೆಡ್ಡಿ, ನರಸಿಂಹಮೂರ್ತಿ, ನಾಗಪ್ಪ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.