
ಬಾಗೇಪಲ್ಲಿ: ‘ಸಾರ್ವಜನಿಕ ಅಧಿಕಾರಿ, ಜನರಿಗೆ ಆಗಲಿ ನಾಯಕರು ಅವಹೇಳನವಾಗಿ, ಅವಾಚ್ಯ ಶಬ್ದಗಳಿಂದ ನಿಂದಿಸುವುದು ರಾಜಕೀಯ ನಾಯಕರಿಗೆ ಒಳ್ಳೆಯದಲ್ಲ’ ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ತಿಳಿಸಿದರು.
ಪಟ್ಟಣದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಶಿಡ್ಲಘಟ್ಟದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್‍ಗೌಡ, ಪೌರಾಯುಕ್ತೆ ಅಮೃತಗೌಡರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವುದು ಖಂಡನೀಯ. ಜಿಲ್ಲೆಗೆ ಅಧಿಕಾರಿಗಳು ಬರುವುದು ವಿರಳ ಆಗಿದೆ. ಸರ್ಕಾರಿ ಅಧಿಕಾರಿಗಳು ಅವರವರ ಇತಿಮಿತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಆದರೆ ಫ್ಲೆಕ್ಸ್ ತೆರವು ಮಾಡಿದ ವಿಚಾರಕ್ಕೆ ಮಹಿಳಾ ಅಧಿಕಾರಿ ಅಮೃತರನ್ನು ನಿಂದನೆ ಮಾಡಿರುವುದು ಸರಿಯಲ್ಲ ಎಂದು ತಿಳಿಸಿದರು.
ಈಗಾಗಲೇ ಕೆಪಿಸಿಸಿ ಶಿಸ್ತು ಸಮಿತಿಯಿಂದ ರಾಜೀವ್‍ಗೌಡರಿಗೆ ನೋಟಿಸ್ ಜಾರಿ ಮಾಡಿದೆ. 7 ದಿನದ ಒಳಗೆ ಉತ್ತರ ನೀಡಬೇಕು ಎಂದು ತಿಳಿಸಿದೆ.
ಶಿಡ್ಲಘಟ್ಟದ ಪೊಲೀಸ್ ಠಾಣೆಯಲ್ಲಿ ರಾಜೀವ್ ಗೌಡ ವಿರುದ್ಧ ಪ್ರಕರಣ ದಾಖಲಾಗಿದೆ. ಜನಪ್ರತಿನಿಧಿಗಳು ಮತ್ತು ರಾಜಕೀಯ ನಾಯಕರು ಅಧಿಕಾರಿಗಳಿಂದ ಆಡಳಿತ ವ್ಯವಸ್ಥೆಗೆ ತೊಂದರೆ ಆಗದಂತೆ ಕೆಲಸ ಮಾಡಿಸಬೇಕು. ಆದರೆ ವೈಯಕ್ತಿಕ ಹಾಗೂ ನಿಂದನೆ ಮಾಡುವುದು ಸರಿಯಲ್ಲ. ಅಧಿಕಾರಿಗಳ ಜತೆ ನಾವು ಇದ್ದೇವೆ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.