ಗೌರಿಬಿದನೂರು: ನಗರದ ಇಂದಿರಾ ಕ್ಯಾಂಟೀನ್‌ಗೆ ನಗರಸಭೆ ತಂಡ ಶುಕ್ರವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಆಹಾರದ ಗುಣಮಟ್ಟ, ಕುಡಿಯುವ ನೀರು ಹಾಗೂ ಅಲ್ಲಿನ ಸ್ವಚ್ಛತೆ ಇಲ್ಲದಿರುವ ಬಗ್ಗೆ ನಗರಸಭೆ ಅಧ್ಯಕ್ಷ ಲಕ್ಷ್ಮಿನಾರಾಯಣಪ್ಪ ವ್ಯವಸ್ಥಾಪಕರಿಗೆ ಎಚ್ಚರಿಕೆ ನೀಡಿದರು.
ಸರ್ಕಾರ ಬಡವರ ಹೊಟ್ಟೆ ತುಂಬಿಸಲು ಇಂದಿರಾ ಕ್ಯಾಂಟೀನ್ ಯೋಜನೆ ಪ್ರಾರಂಭಿಸಿದೆ. ಆಹಾರದಲ್ಲಿ ಗುಣಮಟ್ಟ ಮತ್ತು ಸ್ವಚ್ಛತೆ ಕಾಪಾಡಬೇಕು ಎಂದರು.
ಉಪಹಾರ ಸೇವಿಸಲು ಬಂದಿದ್ದ ಗ್ರಾಹಕರ ಬಳಿ ರುಚಿ ಹಾಗೂ ಸ್ವಚ್ಛತೆ ಬಗ್ಗೆ ಮಾಹಿತಿ ಪಡೆದರು. ಫ್ರಿಡ್ಜ್ ಕೆಟ್ಟುಹೋಗಿರುವ ಬಗ್ಗೆ ಮಾಹಿತಿ ಪಡೆದು ಹೊಸ ಫ್ರಿಡ್ಜ್ ಖರೀದಿ ಪ್ರಕ್ರಿಯೆಗೆ ತಿಳಿಸಿದರು.
ಪೌರಾಯುಕ್ತೆ ಡಿ.ಎಂ ಗೀತಾ, ಸದಸ್ಯ ಡಿ.ಜೆ ಚಂದ್ರಮೋಹನ್, ಪರಿಸರ ಎಂಜಿನಿಯರ್ ಶಿವಶಂಕರ್ ಹಾಗೂ ನಗರಸಭೆ ಸಿಬ್ಬಂದಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.