ಎಸ್.ಎನ್. ಸುಬ್ಬಾರೆಡ್ಡಿ ಹಾಗೂ ಮುನಿರಾಜು
ಚಿಕ್ಕಬಳ್ಳಾಪುರ: ತೆರಿಗೆ ವಂಚನೆಯ ಮೂಲಕ ಸರ್ಕಾರಕ್ಕೆ ಸುಬ್ಬಾರೆಡ್ಡಿ ಕೋಟ್ಯಂತರ ರೂಪಾಯಿ ವಂಚಿಸಿದ್ದರು. ಜನರಿಗೆ ತಪ್ಪು ಮಾಹಿತಿ ನೀಡಿದ್ದರು. ಈ ಬಗ್ಗೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದೆ. ನ್ಯಾಯಮೂರ್ತಿ ಅವರು ನಮ್ಮ ಅರ್ಜಿ ಪುರಸ್ಕರಿಸಿ ಈ ತೀರ್ಪು ನೀಡಿದ್ದಾರೆ ಎಂದು ಬಾಗೇಪಲ್ಲಿ ಕ್ಷೇತ್ರದ ಬಿಜೆಪಿ ಮುಖಂಡ ಸಿ.ಮುನಿರಾಜು ‘ಪ್ರಜಾವಾಣಿ’ಗೆ ತಿಳಿಸಿದರು.
ಬಾಗೇಪಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರು 2023ರ ವಿಧಾನಸಭೆ ಚುನಾವಣೆಯ ವೇಳೆ ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆ. ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಪ್ರತಿಸ್ಪರ್ಧಿ ಅಭ್ಯರ್ಥಿಯಾಗಿದ್ದ ಬಿಜೆಪಿಯ ಸಿ.ಮುನಿರಾಜು ಹೈಕೋರ್ಟ್ ಮೊರೆ ಹೋಗಿದ್ದರು.
ಚುನಾವಣೆಯ ನಂತರ ತೆರಿಗೆ ಪಾವತಿಸಿದರು. ತಕ್ಷಣವೇ ನಾನು ಈ ಬಗ್ಗೆ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದೆ. ಸುಬ್ಬಾರೆಡ್ಡಿ ಈಗ ಶಾಸಕರಲ್ಲ. ನನಗೆ 63 ಸಾವಿರ ಮತಗಳನ್ನು ನೀಡಿದ ಬಾಗೇಪಲ್ಲಿ ಕ್ಷೇತ್ರದ ಜನರ ಗೆಲುವು ಇದು. ಸುಳ್ಳು ಪ್ರಮಾಣ ಪತ್ರವನ್ನು ಯಾರೂ ಸಲ್ಲಿಸಬಾರದು ಎನ್ನುವ ರೀತಿಯಲ್ಲಿ ನ್ಯಾಯಾಲಯವು ಈ ತೀರ್ಪು ನೀಡಿದೆ. ಅವರು ಸುಪ್ರೀಂಕೋರ್ಟ್‌ಗೆ ಹೋದರೂ ನಾವು ಎದುರಿಸುತ್ತೇವೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.