ADVERTISEMENT

ಸೆ. 7ರಿಂದ ನಂದಿ ಗಿರಿಧಾಮಕ್ಕೆ ಪ್ರವೇಶ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2020, 11:43 IST
Last Updated 2 ಸೆಪ್ಟೆಂಬರ್ 2020, 11:43 IST
ಬೆಟ್ಟದ ಮೇಲಿಂದ ಪ್ರಕೃತಿ ಸೌಂದರ್ಯ ಸವಿಯುತ್ತಿರುವ ಜನ
ಬೆಟ್ಟದ ಮೇಲಿಂದ ಪ್ರಕೃತಿ ಸೌಂದರ್ಯ ಸವಿಯುತ್ತಿರುವ ಜನ   

ಚಿಕ್ಕಬಳ್ಳಾಪುರ: ಜಿಲ್ಲೆಯ ಪ್ರವಾಸಿ ತಾಣ ನಂದಿ ಗಿರಿಧಾಮಕ್ಕೆ ಸಾರ್ವಜನಿಕರಿಗೆ ಸೆ. 7ರಿಂದ ಬೆಳಿಗ್ಗೆ 8ರಿಂದ ಸಂಜೆ 5ರವರೆಗೆ ಪ್ರವೇಶ ಕಲ್ಪಿಸಲಾಗಿದೆ.

ಗಿರಿಧಾಮಕ್ಕೆ ಪ್ರವೇಶಿಸುವ ಸಾರ್ವಜನಿಕರು ಮಾಸ್ಕ್ ಧರಿಸುವ ಜತೆಗೆ ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಕಾಯ್ದುಕೊಳ್ಳಬೇಕು. ಕೋವಿಡ್‌ ಮಾರ್ಗಸೂಚಿಗಳನ್ನು ಉಲ್ಲಂಘಿಸಿದರೆ ದಂಡ ವಿಧಿಸಲಾಗುತ್ತದೆ. ಬೆಟ್ಟದಲ್ಲಿ ಕುಡಿಯುವ ನೀರು, ತಿಂಡಿ, ತಿನಿಸುಗಳ ಪ್ಲಾಸಿಕ್‌ ಪೊಟ್ಟಣಗಳನ್ನು ಹೊರಗಡೆಯಿಂದ ತರುವುದನ್ನುನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT