ADVERTISEMENT

ನಂದಿ ವೈದ್ಯಕೀಯ ಕಾಲೇಜು–ಸಂಶೋಧನಾ ಸಂಸ್ಥೆ: ₹40 ಕೋಟಿ ಮೊತ್ತದ ಯಂತ್ರೋಪಕರಣ ಖರೀದಿ

​ಪ್ರಜಾವಾಣಿ ವಾರ್ತೆ
Published 9 ಜನವರಿ 2026, 6:21 IST
Last Updated 9 ಜನವರಿ 2026, 6:21 IST
ಚಿಕ್ಕಬಳ್ಳಾಪುರದ ವೈದ್ಯಕೀಯ ಶಿಕ್ಷಣ ಕಾಲೇಜು
ಚಿಕ್ಕಬಳ್ಳಾಪುರದ ವೈದ್ಯಕೀಯ ಶಿಕ್ಷಣ ಕಾಲೇಜು   

ಚಿಕ್ಕಬಳ್ಳಾಪುರ: ತಾಲ್ಲೂಕಿನ ಅರೂರು ಬಳಿಯ ನಂದಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಗೆ ₹ 40 ಕೋಟಿ ವೆಚ್ಚದಲ್ಲಿ ಯಂತ್ರೋಪಕರಣ ಮತ್ತು ಪೀಠೋಪಕರಣ ಖರೀದಿಗೆ ಸಚಿವ ಸಂಪುಟ ಹಸಿರು ನಿಶಾನೆ ತೋರಿದೆ.

ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ.  ನಂದಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ನೂತನ ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆಗೆ ಅವಶ್ಯವಿಕರು ಯಂತ್ರೋಪಕರಣ ಮತ್ತು ಪೀಠೋಪಕರಣಗಳನ್ನು ₹ 40 ಕೋಟಿ ಅನುದಾನದಲ್ಲಿ ಖರೀದಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ವೈದ್ಯಕೀಯ ಕಾಲೇಜಿಗೆ ಅಗತ್ಯ ಪೀಠೋಪಕರಣ ಮತ್ತು ಯಂತ್ರೋಪಕರಗಳು ಇಲ್ಲದಿರುವುದು ಚಿಕ್ಕಬಳ್ಳಾಪುರ ಜಿಲ್ಲೆಯ ರಾಜಕೀಯದಲ್ಲಿ ಪರಸ್ಪರ ಟೀಕೆಗಳಿಗೂ ಕಾರಣವಾಗಿತ್ತು. ಈ ಅನುಮೋದನೆಯೊಂದಿಗೆ ಅರೂರು ಬಳಿಯ ಕಾಲೇಜಿನಲ್ಲಿಯೇ ಆಸ್ಪತ್ರೆ ಕಾರ್ಯಾರಂಭ ಮತ್ತಿತರ ಚಟುವಟಿಕೆಗಳಿಗೆ ಅನುಕೂಲವಾಗಲಿದೆ.

ADVERTISEMENT

ಚಿಕ್ಕಬಳ್ಳಾಪುರದ ನಂದಿ ವೈದ್ಯಕೀಯ ಶಿಕ್ಷಣ ಮಹಾವಿದ್ಯಾಲಯದ ಕಾಮಗಾರಿಗಳಿಗೆ ಬಿಜೆಪಿ ಮತ್ತು ಕಾಂಗ್ರೆಸ್ ಸರ್ಕಾರ ಇಲ್ಲಿಯವರೆಗೆ ಒಟ್ಟು ₹ 810 ಕೋಟಿ ಬಿಡುಗಡೆ ಮಾಡಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.