ADVERTISEMENT

ಪ್ರವಾಸೋದ್ಯಮ ಇಲಾಖೆಯಿಂದಲೇ ನಂದಿಬೆಟ್ಟ ನಿರ್ವಹಣೆ

ಸಚಿವ ಸಂಪುಟದಲ್ಲಿ ನಿರ್ಧಾರ: ಸಚಿವ ಸುಧಾಕರ್‌

​ಪ್ರಜಾವಾಣಿ ವಾರ್ತೆ
Published 4 ಜನವರಿ 2021, 3:25 IST
Last Updated 4 ಜನವರಿ 2021, 3:25 IST

ಚಿಕ್ಕಬಳ್ಳಾಪುರ: ‘ಜಿಲ್ಲೆಯ ಐತಿಹಾಸಿಕ ಪ್ರವಾಸಿ ತಾಣ ನಂದಿಬೆಟ್ಟದ ನಿರ್ವಹಣೆಯನ್ನು ಪ್ರಸ್ತುತ ಮೂರು ಇಲಾಖೆಗಳು ನಡೆಸುತ್ತಿವೆ. ಇದನ್ನು ಪ್ರವಾಸೋದ್ಯಮ ಒಂದೇ ಇಲಾಖೆಗೆ ವಹಿಸಲು ಕ್ಯಾಬಿನೆಟ್‍ನಲ್ಲಿ ತೀರ್ಮಾನ ಆಗಿದ್ದು, ಇನ್ನು ಮುಂದೆ ನಂದಿಬೆಟ್ಟದ ನಿರ್ವಹಣೆ ಪ್ರವಾಸೋದ್ಯಮ ಇಲಾಖೆಯೇ ಮಾಡಲಿದೆ. ಇದರ ಜತೆಗೆ ನಂದಿಬೆಟ್ಟದ ಅಭಿವೃದ್ಧಿಗಾಗಿ ಸರ್ಕಾರದಿಂದ ₹ 10 ಕೋಟಿ ಬಿಡುಗಡೆಯಾಗಿದ್ದು, ಈ ಸಂಬಂಧ ಜಿಲ್ಲಾಡಳಿತ ಈಗಾಗಲೇ ಕ್ರಿಯಾಯೋಜನೆ ವರದಿ ನೀಡಿದೆ. ಒಂದು ವಾರದಲ್ಲಿ ಇದಕ್ಕೆ ಅಂತಿಮ ತೀರ್ಮಾನ ಕೈಗೊಳ್ಳಲಿದ್ದೇವೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸುಧಾಕರ್‌ ತಿಳಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಲೋಕೋಪಯೋಗಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳೊಂದಿಗೆ ಭಾನುವಾರ ಸಭೆ ನಡೆಸಿದ ಬಳಿಕ ಸುದ್ದಿಗಾರರಿಗೆ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT