ADVERTISEMENT

‘ನಾನು, ಚಿದಾನಂದ ಜೋಡೆತ್ತು’

Oct10Bgp2

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2020, 4:41 IST
Last Updated 11 ಅಕ್ಟೋಬರ್ 2020, 4:41 IST
ಬಾಗೇಪಲ್ಲಿ ಪಟ್ಟಣದ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಮುಂದೆ ಹಮ್ಮಿಕೊಂಡಿದ್ದ ಅಗ್ನೇಯ ಪದವಿಧರರ ಕ್ಷೇತ್ರದ ಚುನಾವಣಾ ಪ್ರಚಾರ ಸಭೆಯನ್ನು ವಿಧಾನಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ, ಬಿಜೆಪಿ ಅಭ್ಯಥರ್ಿ ಚಿದಾನಂದ ಎಂ ಗೌಡ ಉದ್ಘಾಟಿಸಿದರು.
ಬಾಗೇಪಲ್ಲಿ ಪಟ್ಟಣದ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಮುಂದೆ ಹಮ್ಮಿಕೊಂಡಿದ್ದ ಅಗ್ನೇಯ ಪದವಿಧರರ ಕ್ಷೇತ್ರದ ಚುನಾವಣಾ ಪ್ರಚಾರ ಸಭೆಯನ್ನು ವಿಧಾನಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ, ಬಿಜೆಪಿ ಅಭ್ಯಥರ್ಿ ಚಿದಾನಂದ ಎಂ ಗೌಡ ಉದ್ಘಾಟಿಸಿದರು.   

ಬಾಗೇಪಲ್ಲಿ: ‘ಬಿಜೆಪಿ ಸರ್ಕಾರದಲ್ಲಿ ರೈತರ, ನಿರುದ್ಯೋಗಿಗಳ ಪರ ನಾನು ಹಾಗೂ ಆಗ್ನೇಯ ಪದವೀಧರರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಚಿದಾನಂದ ಎಂ. ಗೌಡರವರು ಜೋಡೆತ್ತುಗಳಾಗಿ ಕೆಲಸ ನಿರ್ವಹಿಸುತ್ತೇವೆ’ ಎಂದು ವಿಧಾನಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ತಿಳಿಸಿದರು.

ಪಟ್ಟಣದ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿಆಗ್ನೇಯ ಪದವೀಧರರ ಕ್ಷೇತ್ರದ ಬಿಜೆಪಿಅಭ್ಯರ್ಥಿ ಚಿದಾನಂದ ಎಂ. ಗೌಡ ಪರ ಚುನಾವಣಾ ಮತ ಪ್ರಚಾರ ಮಾಡಿ ಮಾತನಾಡಿದರು.

‘ಕಳೆದ ಮೂರು ವಿಧಾನಪರಿಷತ್ ಚುನಾವಣೆಗಳಲ್ಲಿ ಪದವೀಧರರು, ಶಿಕ್ಷಕರು, ಉಪನ್ಯಾಸಕರು ಸೇರಿದಂತೆ ಕ್ಷೇತ್ರದ ಮತದಾರರು ಗೆಲ್ಲಿಸಿದ್ದೀರಿ. ಕ್ಷೇತ್ರದ ಮತದಾರರ ಋಣವನ್ನು ಎಂದಿಗೂ ಮರೆಯುವುದಿಲ್ಲ. ಮತದಾನಪಾವಿತ್ರ್ಯಕ್ಕೆ ಎಂದಿಗೂ ಚ್ಯುತಿ ಬರದಂತೆ ಕೆಲಸ ಮಾಡಿದ್ದೇನೆ. ಇದೇ ಮಾದರಿಯಲ್ಲಿ ಚಿದಾನಂದ ಗೌಡ ಶಿಕ್ಷಣ ಸಂಸ್ಥೆಯನ್ನು ತಮ್ಮ ಗುರುವಿನ ಹೆಸರಿನಲ್ಲಿ ಮಾಡಿ ನೂರಾರು ಮಂದಿವಿದ್ಯಾರ್ಥಿಗಳಿಗೆ ವಿದ್ಯಾದಾನ ಮಾಡುತ್ತಿದ್ದಾರೆ. ಕ್ಷೇತ್ರದ ಮತದಾರರುಆಶೀರ್ವಾದ ಮಾಡಿದರೆ, ಜೋಡೆತ್ತುಗಳಾಗಿ ಕೆಲಸ ಮಾಡುತ್ತೇವೆ’ ಎಂದರು.

ADVERTISEMENT

‘ಎನ್‌ಪಿಎಸ್ ನೌಕರರನ್ನುಸರ್ಕಾರಿ ನೌಕರರನ್ನಾಗಿ ಮಾಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪರವರಿಗೆ ಮನವಿ ಮಾಡಿದ್ದೇವೆ. ಮುಂದಿನ ದಿನಗಳಲ್ಲಿಸರ್ಕಾರಿ ನೌಕರರನ್ನಾಗಿ ಮಾಡುವ ಭರವಸೆ ನೀಡಿದ್ದಾರೆ. ಖಾಸಗಿ ಶಿಕ್ಷಕರಿಗೆ, ಅತಿಥಿ ಉಪನ್ಯಾಸಕರಿಗೆ ಪರಿಹಾರ ನೀಡುವಂತೆಯು ಮನವಿ ಮಾಡಲಾಗಿದೆ. ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ ಎಲ್ಲರಿಗೂ ಆರೋಗ್ಯ ಚೀಟಿಗಳನ್ನು ಮಾಡಿಕೊಳ್ಳಬೇಕು’ ಎಂದು ಮನವಿ ಮಾಡಿದರು.

ಬಿಜೆಪಿಅಭ್ಯರ್ಥಿ ಚಿದಾನಂದ ಎಂ. ಗೌಡ ಮಾತನಾಡಿ, ‘ಗ್ರಾಮೀಣ ಪ್ರದೇಶದಲ್ಲಿ ಜನಿಸಿದ ನಾನು, ಪದವೀಧರರ ಕಷ್ಟಗಳ ಬಗ್ಗೆ ಸಂಪೂರ್ಣವಾಗಿ ತಿಳಿದಿದ್ದೇನೆ. ದೇಶ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದೆ. ಬಿಜೆಪಿಅಭ್ಯರ್ಥಿಯನ್ನು ಗೆಲ್ಲಿಸಿದರೆ, ಕ್ಷೇತ್ರದ ಸಮಸ್ಯೆಗಳ ಬಗ್ಗೆಸರ್ಕಾರಗಳ ಜೊತೆ ಕೆಲಸ ಮಾಡಲು ಸಾಧ್ಯವಾಗುತ್ತದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಸರ್ಕಾರಿ ನೌಕರರ ಸಂಘದ ತಾಲ್ಲೂಕು ಗೌರವಾಧ್ಯಕ್ಷ ಆರ್.ಹನುಮಂತರೆಡ್ಡಿ, ಶ್ರೀನಿವಾಸರೆಡ್ಡಿ, ಕೆ.ಬಿ.ಆಂಜನೇಯರೆಡ್ಡಿ, ಪ್ರಾಧ್ಯಾಪಕ ಪ್ರೊ.ಕೆ.ಟಿ.ವೀರಾಂಜನೇಯ, ಉಪನ್ಯಾಸಕರಾದ ಎನ್.ನಾಗರಾಜ್, ಟಿ.ಎನ್.ರವಿ, ರಾಜಾರೆಡ್ಡಿ, ನಾಗಮಲ್ಲರೆಡ್ಡಿ, ಎಂ.ವಿ.ರಂಗಾರೆಡ್ಡಿ, ಯಲ್ಲಂಪಲ್ಲಿಕೃಷ್ಣಾರೆಡ್ಡಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.