ADVERTISEMENT

ನರೇಗಾ ಸದ್ಬಳಕೆ: ಶಾಸಕರ ಸಲಹೆ

ದುಡಿಯೋಣ ಬಾ ಅಭಿಯಾನದ ಪ್ರಚಾರ ವಾಹನಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2022, 5:48 IST
Last Updated 12 ಏಪ್ರಿಲ್ 2022, 5:48 IST
ಕೊರಟಗೆರೆ ತಾಲ್ಲೂಕಿನ ಬೂದಗವಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಶಾಸಕ ಡಾ.ಜಿ. ಪರಮೇಶ್ವರ ದುಡಿಯೋಣ ಬಾ ಅಭಿಯಾನದ ಪ್ರಚಾರ ವಾಹನಕ್ಕೆ ಇತ್ತೀಚೆಗೆ ಚಾಲನೆ ನೀಡಿದರು
ಕೊರಟಗೆರೆ ತಾಲ್ಲೂಕಿನ ಬೂದಗವಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಶಾಸಕ ಡಾ.ಜಿ. ಪರಮೇಶ್ವರ ದುಡಿಯೋಣ ಬಾ ಅಭಿಯಾನದ ಪ್ರಚಾರ ವಾಹನಕ್ಕೆ ಇತ್ತೀಚೆಗೆ ಚಾಲನೆ ನೀಡಿದರು   

ಕೊರಟಗೆರೆ: ತಾಲ್ಲೂಕಿನ ಗ್ರಾಮೀಣ ಜನತೆಯು ದುಡಿಯೋಣ ಬಾ ಅಭಿಯಾನವನ್ನು ಸದುಪಯೋಗ ಪಡಿಸಿಕೊಂಡು ಅಭಿವೃದ್ಧಿ ಹೊಂದಬೇಕು ಎಂದುಶಾಸಕ ಡಾ.ಜಿ. ಪರಮೇಶ್ವರ ತಿಳಿಸಿದರು.

ತಾಲ್ಲೂಕಿನ ಬೂದಗವಿ ಗ್ರಾಮ ಪಂಚಾಯಿತಿಯಿಂದ ಈಚೆಗೆ ಹಮ್ಮಿಕೊಂಡಿದ್ದ ದುಡಿಯೋಣ ಬಾ ಅಭಿಯಾನದ ಪ್ರಚಾರ ವಾಹನಕ್ಕೆ ಹಸಿರು ನಿಶಾನೆ ತೋರಿ ಅವರು ಮಾತನಾಡಿದರು.

ನರೇಗಾ ಯೋಜನೆಯಡಿ ದಿನವೊಂದಕ್ಕೆ ನೀಡಲಾಗುವ ಕೂಲಿ ದರವು ₹ 289ರಿಂದ ₹ 309ಕ್ಕೆ ಹೆಚ್ಚಳವಾಗಿದೆ. ಗ್ರಾಮೀಣ ಜನತೆ ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು. ಯೋಜನೆಯು ಗ್ರಾಮೀಣರಿಗೆ ವರದಾನವಾಗಿದೆ ಎಂದರು.

ADVERTISEMENT

ಹೊಸದುರ್ಗ ಕನಕ ಗುರುಪೀಠದ ಈಶ್ವರಾನಂದಪುರಿ ಸ್ವಾಮೀಜಿ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಅತೀಕ್ ಪಾಷಾ, ಬೂದಗವಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಎನ್. ವಿನೋದ, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಡಾ.ಡಿ. ದೊಡ್ಡಸಿದ್ದಯ್ಯ, ತಹಶೀಲ್ದಾರ್ ನಹೀದಾ ಜಮ್ ಜಮ್, ಎಇಇ ರವಿಕುಮಾರ್, ಸಹಾಯಕ ನಿರ್ದೇಶಕ ಬಿ.ಎಸ್. ಕುಮಾರಸ್ವಾಮಿ, ತಾಂತ್ರಿಕ ಸಂಯೋಜಕ ಡಿ. ರಾಜಣ್ಣ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿಜಯಕುಮಾರಿ, ತಾಲ್ಲೂಕು ಐಇಸಿ ಸಂಯೋಜಕ ಟಿ.ಕೆ. ವಿನುತ್, ತಾಂತ್ರಿಕ ಸಹಾಯಕಿ ಲಾವಣ್ಯ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.