ADVERTISEMENT

ನರೇಗಾ: ಅಧಿಕಾರಿಗಳಿಗೆ ರಾಜ್ಯ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2021, 4:49 IST
Last Updated 7 ಏಪ್ರಿಲ್ 2021, 4:49 IST
ಫೌಜಿಯಾ ತರನ್ನುಮ್
ಫೌಜಿಯಾ ತರನ್ನುಮ್   

ಶಿಡ್ಲಘಟ್ಟ: ಮಹಾತ್ಮ ಗಾಂಧಿ ನರೇಗಾ ಯೋಜನೆಯ 2020-21ನೇ ಸಾಲಿನ ರಾಜ್ಯಮಟ್ಟದ ಪ್ರಶಸ್ತಿಗಳನ್ನು ಸರ್ಕಾರ ಘೋಷಿಸಿದ್ದು, ಜಿಲ್ಲೆಯಲ್ಲಿ ಅತ್ಯುತ್ತಮವಾಗಿ ನರೇಗಾ ಯೋಜನೆ ಅನುಷ್ಠಾನಗೊಳಿಸಿದ ಹಲವು ಅಧಿಕಾರಿಗಳು ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭವು ಹುಬ್ಬಳ್ಳಿಯಲ್ಲಿ ಏಪ್ರಿಲ್ 9 ರಂದು ನಡೆಯಲಿದೆ.

ಮಹಾತ್ಮ ಗಾಂಧಿ ನರೇಗಾ ಯೋಜನೆಯ ಅನುಷ್ಠಾನದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ನಿಕಟಪೂರ್ವ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಫೌಜಿಯಾ ತರನ್ನುಮ್, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪಿ.ಶಿವಶಂಕರ್, ಜಿಲ್ಲಾ ಎಂ.ಐ.ಎಸ್ ಸಂಯೋಜಕ ಜಿ.ಎಲ್.ಮಧುಸೂದನ್ (ಡಿ.ಎಂ.ಐ.ಎಸ್), ಚಿಂತಾಮಣಿ ಕಾರ್ಯನಿರ್ವಾಹಕ ಅಧಿಕಾರಿ ಜಿ.ಆರ್.ಮಂಜುನಾಥ, ಶಿಡ್ಲಘಟ್ಟ ತಾಲ್ಲೂಕು ತಾಂತ್ರಿಕ ಸಹಾಯಕ ಎಂಜಿನಿಯರ್ ವಿವೇಕ್ ಮತ್ತು ಅತ್ಯುತ್ತಮ ಪಂಚಾಯಿತಿ ಅಧಿಕಾರಿ ಈ.ತಿಮ್ಮಸಂದ್ರ ಪಿಡಿಒ ತನ್ವೀರ್ ಅಹಮದ್ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT