ADVERTISEMENT

ವೈಜ್ಞಾನಿಕ ಬೆಳವಣಿಗೆಯಿಂದ ದೇಶದ ಪ್ರಗತಿ: ಡಾ.ಬಿ.ಆರ್.ಗುರುಪ್ರಸಾದ್

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2021, 15:13 IST
Last Updated 5 ಮಾರ್ಚ್ 2021, 15:13 IST
ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಡಾ.ಬಿ.ಆರ್.ಗುರುಪ್ರಸಾದ್ ಉದ್ಘಾಟಿಸಿದರು
ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಡಾ.ಬಿ.ಆರ್.ಗುರುಪ್ರಸಾದ್ ಉದ್ಘಾಟಿಸಿದರು   

ಚಿಕ್ಕಬಳ್ಳಾಪುರ: ’ವೈಜ್ಞಾನಿಕ ಬೆಳವಣಿಗೆಯಿಂದ ದೇಶ ಪ್ರಗತಿಯತ್ತ ಸಾಗುತ್ತದೆ. ವೈಜ್ಞಾನಿಕ ವಿಚಾರಗಳಲ್ಲಿ ಯಾವುದೇ ಒಂದು ದೇಶ ಮುನ್ನಡೆ ಸಾಧಿಸಿದರೆ ಅದು ಅಭಿವೃದ್ಧಿಯ ಕಡೆಗೆ ಸಾಗುತ್ತಿದೆ ಎನ್ನುವುದರ ಪ್ರತೀಕ‘ ಎಂದು ಇಸ್ರೊ ವಿಜ್ಞಾನಿ ಡಾ.ಬಿ.ಆರ್.ಗುರುಪ್ರಸಾದ್ ತಿಳಿಸಿದರು.

ನಗರದ ಎಸ್‌ಜೆಸಿ ತಾಂತ್ರಿಕ ವಿದ್ಯಾಲಯದಲ್ಲಿ ಶುಕ್ರವಾರ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಸಹಯೋಗದಲ್ಲಿ ನಡೆದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ಯುವ ಜನರ ಚಿಂತನೆ ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲಿದೆ. ದೇಶದಕ್ಕೆ ಅನೇಕ ವಿಜ್ಞಾನಿಗಳು ಮಹತ್ವದ ಕೊಡುಗೆ ನೀಡಿದ್ದಾರೆ ಎಂದರು. ಸಿ.ವಿ.ರಾಮನ್ ಅವರ ಆವಿಷ್ಕಾರಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ADVERTISEMENT

ಎಸ್‌ಜೆಸಿಐಟಿ ಪ್ರಾಂಶುಪಾಲ ಡಾ.ಜಿ.ಟಿ.ರಾಜು ಮಾತನಾಡಿ, ’ವಿಜ್ಞಾನಿಗಳು ದೇಶದ ಬೆನ್ನೆಲುಬು. ದೇಶದ ಆರ್ಥಿಕ ಪ್ರಗತಿ ವೈಜ್ಞಾನಿಕ ಬೆಳವಣಿಗೆಯಿಂದ ಮಾತ್ರ ಸಾಧ್ಯ. ತಂತ್ರಜ್ಞಾನದ ಸಹಾಯದಿಂದ ಮನುಷ್ಯನ ಬೆಳವಣಿಗೆ ಸಾಧ್ಯವಾಗುತ್ತದೆ‘ ಎಂದು ಹೇಳಿದರು.

ಡಿಆರ್‌ಡಿಒ ವಿಜ್ಞಾನಿ ಡಾ.ಪಿ.ರಘೋತ್ತಮರಾವ್, ನಬೆಂಗಳೂರಿನ ನ್ಯಾಷನಲ್ ಕಾಲೇಜಿನ ಪ್ರಾಧ್ಯಾಪಕಿ ವೈ.ಸಿ.ಕಮಲ, ಬಿಜಿಎಸ್ ಸಂಶೋಧನಾ ಕೇಂದ್ರದ ನಿರ್ದೇಶಕ ಟಿ.ಮುನಿಕೆಂಚೇಗೌಡ, ಎಸ್‌ಜೆಸಿಐಟಿ ಕುಲಸಚಿವ ಜೆ.ಸುರೇಶ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.