ADVERTISEMENT

ಜೈಲಲ್ಲಿ ಇತಿಹಾಸ ಬರೆಯುವವರು ಬೇಕಾ: ಕಟೀಲ್ ಪ್ರಶ್ನೆ

ಚಿಕ್ಕಬಳ್ಳಾಪುರದಲ್ಲಿ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್‌ ವಾಗ್ದಾಳಿ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2019, 13:23 IST
Last Updated 3 ಡಿಸೆಂಬರ್ 2019, 13:23 IST
ಚಿಕ್ಕಬಳ್ಳಾಪುರದಲ್ಲಿ ಮಂಗಳವಾರ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್‌ ಅವರು ರೋಡ್‌ ಶೋ ನಡೆಸಿದರು.
ಚಿಕ್ಕಬಳ್ಳಾಪುರದಲ್ಲಿ ಮಂಗಳವಾರ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್‌ ಅವರು ರೋಡ್‌ ಶೋ ನಡೆಸಿದರು.   

ಚಿಕ್ಕಬಳ್ಳಾಪುರ: ‘ಚಿಕ್ಕಬಳ್ಳಾಪುರ ಕ್ಷೇತ್ರದ ಅಭಿವೃದ್ಧಿಗಾಗಿ ಡಾ.ಕೆ.ಸುಧಾಕರ್ ಅವರು ಬಹಳಷ್ಟು ಓಡಾಡಿ ವೈದ್ಯಕೀಯ ಕಾಲೇಜು ತರುವ ಜತೆಗೆ ಹೊಸ ತಾಲ್ಲೂಕು ಮಾಡಿಸಿದರು’ ಎಂದುಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್‌ ಬಿಜೆಪಿ ಅಭ್ಯರ್ಥಿಯ ಪರ ಬ್ಯಾಟಿಂಗ್ ಮಾಡಿದರು.

ನಗರದಲ್ಲಿ ಮಂಗಳವಾರ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರ ಪರ ನಡೆದ ರೋಡ್‌ ಶೋದಲ್ಲಿ ಮಾತನಾಡಿದ ಅವರು, ‘ಬಹಳಷ್ಟು ಜನ ತಮ್ಮ ಸ್ವಾರ್ಥದಿಂದಾಗಿ ತಿಹಾರ್ ಜೈಲಿನಲ್ಲಿ ರಾಜ್ಯದ ಇತಿಹಾಸ ಬರೆಯಲು ಹೋದರು. ನಿಮಗೆ ಜೈಲಿನಲ್ಲಿ ಕರ್ನಾಟಕದ ಇತಿಹಾಸ ಬರೆಯುವ ಜನ ಬೇಕಾ? ಚಿಕ್ಕಬಳ್ಳಾಪುರದ ಅಭಿವೃದ್ಧಿ ಮಾಡುವ ಜನ ಬೇಕಾ?’ ಎಂದು ಪರೋಕ್ಷವಾಗಿ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಅವರನ್ನು ಲೇವಡಿ ಮಾಡಿದರು.

‘ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದವರನ್ನು ಅನರ್ಹರು ಎಂದು ಟೀಕೆ ಮಾಡುತ್ತಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಿಮ್ಮನ್ನು ಜನ ಸೋಲಿಸಿ ಅನರ್ಹರನ್ನಾಗಿ ಮಾಡಿದರಲ್ಲ? ಮುಖ್ಯಮಂತ್ರಿಯಾದ ನಿಮ್ಮ ನೇತೃತ್ವದಲ್ಲಿ ಎದುರಿಸಿದ ಚುನಾವಣೆಯಲ್ಲಿ ನೀವು ರಾಜ್ಯದಲ್ಲಿ ಎಷ್ಟು ಸ್ಥಾನ ಪಡೆದುಕೊಂಡಿರಿ? ಜನ ನಿಮ್ಮನ್ನು ಅನರ್ಹರನ್ನಾಗಿ ಮಾಡಿ, ಯಡಿಯೂರಪ್ಪ ಅವರನ್ನು ಅರ್ಹರನ್ನಾಗಿ ಮಾಡಿದರು’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ವಿರುದ್ಧವೂ ವಾಗ್ದಾಳಿ ನಡೆಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.