ADVERTISEMENT

ಚಿಕ್ಕಬಳ್ಳಾಪುರ | ಕರ್ತವ್ಯಲೋಪ: ನಾಲ್ವರು ಸಶಸ್ತ್ರ ಮೀಸಲು‌ ಸಿಬ್ಬಂದಿ ಅಮಾನತು

​ಪ್ರಜಾವಾಣಿ ವಾರ್ತೆ
Published 17 ಜೂನ್ 2020, 14:10 IST
Last Updated 17 ಜೂನ್ 2020, 14:10 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಚಿಕ್ಕಬಳ್ಳಾಪುರ: ಕರ್ತವ್ಯಲೋಪ ಆರೋಪದ ಮೇಲೆ ಚಿಕ್ಕಬಳ್ಳಾಪುರ ಸಶಸ್ತ್ರ ಮೀಸಲು ಪಡೆಯ (ಡಿಎಆರ್) ಸಹಾಯಕ ಸಬ್‌ ಇನ್‌ಸ್ಪೆಕ್ಟರ್‌ ಸೇರಿದಂತೆ ನಾಲ್ಕು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.

‘ನಿಯೋಜಿತ ಸ್ಥಳದಲ್ಲಿ ಕೆಲಸ ಮಾಡದೆ ವಾಹನದಲ್ಲಿ ಕುಳಿತು ಕರ್ತವ್ಯಲೋಪ ಎಸಗಿದ ಡಿಎಎರ್‌ ಎಎಸ್‌ಐ, ಹೆಡ್‌ ಕಾನ್‌ಸ್ಟೆಬಲ್‌ ಮತ್ತು ಇಬ್ಬರು ಕಾನ್‌ಸ್ಟೆಬಲ್‌ಗಳನ್ನು ಅಮಾನತು ಮಾಡಲಾಗಿದೆ’ ಎಂದು ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT