ADVERTISEMENT

ಜಲಸಂರಕ್ಷಣೆ ಕಾಮಗಾರಿಗೆ ಆದ್ಯತೆ

ನರೇಗಾ ಯೋಜನೆಯ ತ್ರೈಮಾಸಿಕ ವರದಿ ಸಭೆ

​ಪ್ರಜಾವಾಣಿ ವಾರ್ತೆ
Published 10 ಜುಲೈ 2020, 8:36 IST
Last Updated 10 ಜುಲೈ 2020, 8:36 IST

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಜಲಸಂರಕ್ಷಣೆ ಕಾಮಗಾರಿಗಳ ಅನುಷ್ಟಾನಕ್ಕೆ ಹೆಚ್ಚಿನ ಆದ್ಯತೆ ‌ನೀಡಲಾಗಿದೆ ಎಂದು ಜಿ.ಪಂ ಸಿಇಒ ಬಿ.ಫೌಜಿಯಾ ತರನಮ್ ಹೇಳಿದರು.

ಮಹಾತ್ಮ ‌ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯು ಗ್ರಾಮೀಣ ಜನರ ಅಭ್ಯುದಯಕ್ಕೆ ಹೆಚ್ಚಿನ ಸಹಕಾರಿಯಾಗಿದೆ ಎಂದು ಜಿಲ್ಲಾ ಪಂಚಾಯಿತಿಯಲ್ಲಿ ನಡೆದ ಸಭೆಯಲ್ಲಿ ನರೇಗಾ ಯೋಜನೆಯ ತ್ರೈಮಾಸಿಕ ವರದಿ ಮಾಹಿತಿ ನೀಡಿದರು.

ಜಿಲ್ಲೆಯ 6 ತಾಲ್ಲೂಕುಗಳ ವ್ಯಾಪ್ತಿಯಲ್ಲಿ ನರೇಗಾ ಯೋಜನೆ ಬಳಸಿ ಗ್ರಾಮೀಣ ಭಾಗದ ಜನರ ಜೀವನೋಪಾಯದ ಮಾರ್ಗಗಳನ್ನು ಬಲಪಡಿಸಲು ಮಹತ್ವದ ಹೆಜ್ಜೆಯನ್ನಿಟ್ಟಿದೆ. ಜಿಲ್ಲೆಯಲ್ಲಿ 1,93,053 ಕುಟುಂಬಗಳು ನೋಂದಾಯಿಸಿಕೊಂಡಿದ್ದು ಒಟ್ಟು 4,83,546 ಜನರು ಉದ್ಯೋಗ ಚೀಟಿಗಳಲ್ಲಿ ಸೇರ್ಪಡೆಗೊಂಡಿದ್ದಾರೆ. ಇಲ್ಲಿವರೆಗೆ 1,92,440 ಉದ್ಯೋಗ ಚೀಟಿ ವಿತರಿಸಲಾಗಿದೆ. ಪ್ರಸ್ತುತ 38,00,000 ಮಾನವ ದಿನಗಳ ಗುರಿಯನ್ನು ನಿಗದಿಪಡಿಸಲಾಗಿದ್ದು, ಈವರೆಗೆ 18,90,040 ಮಾನವ ದಿನಗಳನ್ನು ಸೃಜಿಸಲಾಗಿದೆ
ಎಂದರು.

ADVERTISEMENT

ತ್ರೈಮಾಸಿಕ ಅವಧಿಯಲ್ಲಿ ರೇಷ್ಮೆ ಇಲಾಖೆ 3764, ತೋಟಗಾರಿಕೆ ಇಲಾಖೆ 4066, ಕೃಷಿ ಇಲಾಖೆ 2418 ಮತ್ತು ಅರಣ್ಯ ಇಲಾಖೆಯಡಿ 716 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.